ಕೋವಿಡ್-19: ಗಂಗೊಳ್ಳಿ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಕುಂದಾಪುರ: ಕೊರೊನಾ ವೈರಸ್ ಹರಡದಂತೆ ಸರಕಾರ ನೀಡಿದ ಆದೇಶ ಮತ್ತು ಸೂಚನೆಗಳನ್ನು ಗಂಗೊಳ್ಳಿ ಜನತೆ ಕಟ್ಟುನಿಟ್ಟಾಗಿ ಪಾಲಿಸಿದ್ದು, ಲಾಕ್ಡೌನ್ಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದಿರುವವರಿಗೆ ಕ್ವಾರಂಟೈನ್ ಮಾಡಲಾಗುತ್ತಿದೆ. ಲಾಕ್ ಡೌನ್ ಸಡಿಲಿಕೆ ಸಂದರ್ಭ ಜನರು ಅನಗತ್ಯವಾಗಿ ವಾಹನಗಳಲ್ಲಿ ಸಂಚರಿಸಬಾರದು. ಕೋವಿಡ್-19 ವೈರಸ್ ಹರಡದಂತೆ ಎಲ್ಲರೂ ಮುಂಜಾಗ್ರತಾ ಕ್ರಮಕೈಗೊಂಡು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಮಂಗಳವಾರ ಜರಗಿದ ಗ್ರಾಮ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಬನಾಜ್, ಗ್ರಾಮ ಲೆಕ್ಕಿಗ ರಾಘವೇಂದ್ರ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಸಮಿತಿ ಸದಸ್ಯ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಸೈ ವೆಂಕಟೇಶ ಗೊಲ್ಲ, ಸಿಬ್ಬಂದಿ ನಾಗರಾಜ ಕುಲಾಲ್, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಕಲ್ಪನಾ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ ಉಪಸ್ಥಿತರಿದ್ದರು.
ಗ್ರಾಪಂ ಕಾರ್ಯದರ್ಶಿ ದಿನೇಶ ಶೇರುಗಾರ್ ಸ್ವಾಗತಿಸಿ, ವಂದಿಸಿದರು.