Home Mangalorean News Kannada News ಕೋವಿಡ್-19: ಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಲು ಗ್ರಾ.ಪಂ.ಗಳಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚನೆ

ಕೋವಿಡ್-19: ಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಲು ಗ್ರಾ.ಪಂ.ಗಳಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚನೆ

Spread the love

ಕೋವಿಡ್-19: ಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಲು ಗ್ರಾ.ಪಂ.ಗಳಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚನೆ

ಲಾಕ್ ಡೌನ್ ಯಶಸ್ವಿ ಗೊಳಿಸಲು ಜನರ ಸಹಕಾರ ಅತ್ಯಗತ್ಯವಾಗಿದೆ. ಜನರು ಸ್ವಯಂ ಕಫ್ಯೂ೯ಗೊಳಗಾಗಿ, ಕರೋನಾ ಸಾಂಕ್ರಾಮಿಕ ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡುತ್ತಿದ್ದರು.

ಡೆಂಗ್ಯೂ, ಮಲೇರಿಯಾ ವ್ಯಾಪಿಸದಂತೆ ಗ್ರಾ.ಪಂ.ಗಳು ಸ್ಥಳೀಯವಾಗಿ‌ ಮುನ್ನೆಚ್ಚರಿಕೆ ವಹಿಸಬೇಕು. ಕೆಲವೆಡೆ ದಿನಸಿ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಜಾಸ್ತಿ ದರ ವಿಧಿಸಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬರುತ್ತಿವೆ. ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯ ಅಂಗಡಿಗಳಲ್ಲಿ ಆಹಾರ ಸಾಮಾಗ್ರಿಗಳ ದರಗಳನ್ನು ಆಗಿಂದಾಗ್ಗೆ ಪರಿಶೀಲಿಸಬೇಕು ಎಂದು ಅವರು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಆರೋಗ್ಯ ಸಮೀಕ್ಷಾ ಕಾರ್ಯಗಳಿಗೆ ಆಶಾ ಕಾರ್ಯಕರ್ತರೊಂದಿಗೆ ಸಹಕರಿಸಬೇಕು. 2 ನೇ ಹಂತದ ಸಮೀಕ್ಷೆ ನಡೆಯುತ್ತಿದ್ದು, ಇದು ಮಹತ್ವ ಅಗಿದೆ. ಸಾರ್ವಜನಿಕರ ಚಲನವಲನಗಳ ಮಾಹಿತಿ ಅರಿತು, ಆರೋಗ್ಯ ಸಮೀಕ್ಷೆ ಯಶಸ್ವಿ ಗೊಳ್ಳಲು ಸಹಕರಿಸಬೇಕು ಎಂದು ಸಚಿವ ಕೋಟ ಸೂಚಿಸಿದರು.

ಗ್ರಾಮ ಪಂಚಾಯತಿಗಳಲ್ಲಿ ಪಡಿತರ ವಿತರಣೆಯನ್ನು ಪರಿಶೀಲಿಸಿದ ಸಚಿವರು, ಏಪ್ರಿಲ್ ತಿಂಗಳಲ್ಲಿ ಪಡಿತರ ವಿತರಣೆ ಯಶಸ್ವಿಯಾಗಿ ನಡೆದಿದೆ. ಕಾರ್ಡ್ ಇಲ್ಲದವರಿಗೆ ಅಕ್ಕಿ ಕೊಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ತಂಡವಾಗಿ ಕೆಲಸ ಮಾಡಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು

ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ‌ ನಿರ್ವಹಿಸಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಜಾರಿಗೆ ತರಬೇಕು. ಕುಡಿಯುವ ನೀರಿನ ಅಗತ್ಯ ಇರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡಲಾಗುತ್ತದೆ ಎಂದು ಹೇಳಿದರು.

ಕೋರೋನ ನಿರ್ವಹಣೆಗಾಗಿ ಪ್ರತಿ ಗ್ರಾಮ ಪಂಚಾಯತಿಗೆ 20,000 ರೂ. ಅನುದಾನ ನೀಡಲಾಗಿದೆ ಇದರಲ್ಲಿ ವಿವಿಧ ಜಾಗೃತಿ ಮೂಡಿಸುವ ಕಾರ್ಯವನ್ನು ಹಾಗೂ ಆಶಾ ಕಾರ್ಯಕರ್ತರಿಗೆ ಅಗತ್ಯ ಸಾಮಾಗ್ರಿಗಳನ್ನು ನೀಡಬಹುದಾಗಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಿಇಓ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಉಪಸ್ಥಿತರಿದ್ದರು


Spread the love

Exit mobile version