Home Mangalorean News Kannada News ಕ್ರೀಡಾಕೂಟಗಳು ಸ್ಪರ್ಧಾಳುಗಳ ನಡುವೆ ಏಕತೆ ಮೂಡಿಸಲು ಸಹಕಾರಿ : ಬಿಷಪ್ ಜೆರಾಲ್ಡ್ ಲೋಬೊ

ಕ್ರೀಡಾಕೂಟಗಳು ಸ್ಪರ್ಧಾಳುಗಳ ನಡುವೆ ಏಕತೆ ಮೂಡಿಸಲು ಸಹಕಾರಿ : ಬಿಷಪ್ ಜೆರಾಲ್ಡ್ ಲೋಬೊ

Spread the love

ಕ್ರೀಡಾಕೂಟಗಳು ಸ್ಪರ್ಧಾಳುಗಳ ನಡುವೆ ಏಕತೆ ಮೂಡಿಸಲು ಸಹಕಾರಿ : ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಕ್ರೀಡಾಕೂಟಗಳು ಸ್ಪರ್ಧಾಳುಗಳ ನಡುವೆ ಏಕತೆ ಮತ್ತು ಸಮಗ್ರತೆಯನ್ನು ಮೂಡಿಸಲು ಸಹಕಾರಿಯಾಗುತ್ತದೆ ಈ ಮೂಲಕ ತಾವೆಲ್ಲರೂ ಒಂದೇ ಭಾವನೆ ಮೂಡಿಸುತ್ತದೆ ಎಂದು ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಹೇಳಿದರು.

ಅವರು ಭಾನುವಾರ ಭಾರತೀಯ ಕೆಥೊಲಿಕ್ ಯುವ ಸಂಚಾಲನ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಕ್ರೀಡಾಕೂಟ ‘ಯೂಲಂಪಿಕ್ಸ್ -2019’ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡೆ ಜೀವನದ ಒಂದು ಅವಿಭಾಜ್ಯ ಅಂಗ. ಸಂಪಾದನೆಗಿಂತ ಆರೋಗ್ಯ ಮುಖ್ಯ. ಹೀಗಾಗಿ, ವಿದ್ಯಾಭ್ಯಾಸದೊಂದಿಗೆ ಕ್ರೀಡೆಯತ್ತ ಗಮನ ಹರಿಸಬೇಕೆಂದು ಕಿವಿ ಮಾತು ಹೇಳಿದ ಅವರು ಕ್ರೀಡಾ ಪಟುಗಳು ಕಠಿಣ ಪರಿಶ್ರಮ ಪಟ್ಟರೆ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸ್ಪರ್ಧಾಳು ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು. ಶಿಕ್ಷಣದೊಂದಿಗೆ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡಿದರೆ, ಮಾನಸಿಕ ಹಾಗೂ ದೈಹಿಕ ಸದಢ ಉಂಟಾಗುತ್ತದೆ. ತಾಳ್ಮೆ, ಸಹನೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಕ್ರೀಡಾಕೂಟದಲ್ಲಿ ಟ್ರ್ಯಾಕ್ ಮತ್ತು ಫಿಲ್ಡ್ ಸ್ಪರ್ಧೆಗಳಾದ 100, 200, 400, 800 ಮೀಟರ್ ಒಟ, ರಿಲೆ, ಲಾಂಗ್ ಜಂಪ್, ಹೈಜಂಪ್, ಶಾಟ್ ಪುಟ್, ಡಿಸ್ಕಸ್ ತ್ರೋ, ತಂಡಕೂಟಗಳಾದ ವಾಲಿಬಾಲ್, ತ್ರೋಬಾಲ್, ಬ್ಯಾಡ್ಮಿಂಟನ್, ಕಬಡ್ಡಿ, ಹಗ್ಗಜಗ್ಗಾಟ ಸ್ಪರ್ಧೆಗಳು ಜರುಗಲಿದೆ. ಸ್ಪರ್ಧೆಗಳು ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಜರುಗಿದವು.

ಅಂತರಾಷ್ಟ್ರೀಯ ಪವರ್ ಲಿಫ್ಟರ್ ಜಾಕ್ಸನ್ ಡಿಸೋಜಾ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.

ಕಾರ್ಯಕ್ರಮದಲ್ಲಿ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ|ವಿನ್ಸೆಂಟ್ ಆಳ್ವಾ, ಐಸಿವೈಎಮ್ ಕೇಂದ್ರಿಯ ಸಮಿತಿಯ ನಿರ್ದೇಶಕ ವಂ|ಎಡ್ವಿನ್ ಡಿಸೋಜಾ ಉಪಸ್ಥಿತರಿದ್ದರು.

ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷ ಡಿಯೋನ್ ಡಿಸೋಜಾ ಸ್ವಾಗತಿಸಿ, ಆಶಿಶ್ ಮಿನೇಜಸ್ ಧನ್ಯವಾದವಿತ್ತರು. ಮೆಲಿಶಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.


Spread the love

Exit mobile version