ಕ್ರೀಡಾಪಟುಗಳ ಜವಾಬ್ದಾರಿ ನಮ್ಮದು – ವೇದವ್ಯಾಸ್ ಕಾಮತ್
ಮಂಗಳೂರು : ಒಳ್ಳೆಯ ರೀತಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿ ಯಶಸ್ಸು ಪಡೆಯಿರಿ ಮತ್ತು ಕ್ರೀಡಾಪಟುಗಳಿಗೆ ಯಾವುದೇ ತೊಂದರೆಗಳಾಗದೇ ಇರುವ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ್ ಕಾಮತ್ ಹೇಳಿದರು.
,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಕ್ರಿಡಾ ಪ್ರಾಧಿಕಾರ, ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ “ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2019-20” ಸಾಲಿನ 8 ಜಿಲ್ಲೆಗಳ ಎರಡು ದಿನದ ಕ್ರೀಡಾಕೂಟವು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನ ಎನ್ನುವುದು ರನ್ನಿಂಗ್ ರೇಸ್ ಇದ್ದ ಹಾಗೆ ನಾವು ಸ್ವಲ್ಪ ಎಚ್ಚರ ತಪ್ಪಿದರು ನಾವು ರೇಸ್ ನಿಂದ ಹೊರಬೀಳಬೇಕಾಗುತ್ತದೆ ಮತ್ತು ಕಷ್ಟ ಪಟ್ಟು ಇಲ್ಲಿಯವರೆಗೆ ಬಂದಿದ್ದೀರಿ ಮುಂದೆ ರಾಜ್ಯ-ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಪಡೆಯಿರಿ ಎಂದು ಹೇಳಿದರು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ನಿರಂತರವಾಗಿ ಭಾಗಿಯಾದ್ದೀರಿ ನೀವು ಜೀವನದಲ್ಲಿ ಬಹುದೊಡ್ಡ ಸ್ಥಾನವನ್ನು ಅಲಂಕರಿಸಿರುತ್ತೀರಿ ಹಾಗೇ ನಿಮ್ಮಲ್ಲಿ ಸ್ಪರ್ಧಾತ್ಮಕ ಮನೋಭಾವ ಹೊಂದಿಕೊಂಡು ಮುಂದೆ ಸಾಗಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಆರ್ಥರ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಯುವಜನ ಒಕ್ಕೂಟ ಮುಖ್ಯಸ್ಥರು ಸುರೇಶ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಉಪನಿರ್ದೇಶಕರು ಪ್ರದೀಪ್ ಡಿಸೋಜ. ಮತ್ತಿತರರು ಉಪಸ್ಥಿತರಿದ್ದರು.