Home Mangalorean News Kannada News ಕ್ರೀಡಾ ಮನೋಭಾವದಿಂದ ಪಂದ್ಯಾಟದಲ್ಲಿ ಭಾಗವಹಿಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು: ವೀರೇಂದ್ರ ಹೆಗ್ಗಡೆಯವರು

ಕ್ರೀಡಾ ಮನೋಭಾವದಿಂದ ಪಂದ್ಯಾಟದಲ್ಲಿ ಭಾಗವಹಿಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು: ವೀರೇಂದ್ರ ಹೆಗ್ಗಡೆಯವರು

Spread the love

ಕ್ರೀಡಾ ಮನೋಭಾವದಿಂದ ಪಂದ್ಯಾಟದಲ್ಲಿ ಭಾಗವಹಿಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು: ವೀರೇಂದ್ರ ಹೆಗ್ಗಡೆಯವರು

ಉಜಿರೆ: ಸ್ಫರ್ಧಾಳುಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಪಂದ್ಯಗಳಲ್ಲಿ ಭಾಗವಹಿಸಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಬದ್ಧತೆ, ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪಂದ್ಯಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಅನುಭವ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಉಜರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಭಾನುವಾರ ಅಖಿಲ ಭಾರತ ಅಂತರ ವಿ.ವಿ. ಪುರುಷರ ನೆಟ್‍ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ನೆಟ್‍ಬಾಲ್ ಕ್ರೀಡೆ ಇಂದು ದೇಶ – ವಿದೇಶಗಳಲ್ಲಿ ಜನಪ್ರಿಯವಾಗುತ್ತಿದೆ. ಕ್ರೀಡಾಪಟುಗಳು ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ವೃದ್ಧಿಸಿಕೊಳ್ಳುವುದರೊಂದಿಗೆ ತಮ್ಮ ಆರೋಗ್ಯ ಭಾಗ್ಯವನ್ನು ಕಾಪಾಡಬೇಕು. ದೇಶ ಪ್ರೇಮ ಹಾಗೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಮಂಗಳೂರು ವಿ.ವಿ. ತಂಡದ ನಾಯಕ ಹಾಗೂ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಪಟು ನಿತಿನ್ ಪ್ರತಿಜ್ಞಾವಿಧಿ ಬೋಧಿಸಿದರು.

ಪಂದ್ಯದ ವೀಕ್ಷಕ ಕುರುಕ್ಷೇತ್ರ ವಿವಿ.ಯ ಡಾ. ರಾಜೇಶ್ ಶುಭಾಶಂಸನೆ ಮಾಡಿದರು.

ಎಸ್,ಡಿ,ಎಮ್, ಶಿಕ್ಚಣ ಸಂಸ್ಥೆಗಳ ಕಾರ್ಯದರ್ಶಿ ಡಾ, ಬಿ. ಯಶೋವರ್ಮ ಉಪಸ್ಥಿತರಿದ್ದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ. ಸ್ವಾಗತಿಸಿದರು.

ಎಸ್.ಡಿ.ಎಮ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ.ಎನ್. ಕೇಶವ ಧನ್ಯವಾದವಿತ್ತರು. ಪ್ರೊ. ಬಿ.ಎ. ಕುಮಾರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

ದೇಶದ 45 ವಿ.ವಿಗಳಿಂದ 450 ಕ್ರೀಡಾಪಟುಗಳು 4 ದಿನ ನಡೆಯುವ ನೆಟ್‍ಬಾಲ್ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ.


Spread the love

Exit mobile version