Home Mangalorean News Kannada News ಕ್ವಾರಂಟೈನ್ ಕೇಂದ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲಿ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕ್ರಮ – ದಕ...

ಕ್ವಾರಂಟೈನ್ ಕೇಂದ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲಿ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕ್ರಮ – ದಕ ಜಿಲ್ಲಾ ಎಸ್ಪಿ ಎಚ್ಚರಿಕೆ

Spread the love

ಕ್ವಾರಂಟೈನ್ ಕೇಂದ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲಿ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕ್ರಮ – ದಕ ಜಿಲ್ಲಾ ಎಸ್ಪಿ ಎಚ್ಚರಿಕೆ

ಮಂಗಳೂರು: ದೇಶದ ಇತರೆ ರಾಜ್ಯಗಳಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳು ಪ್ರಸ್ತುತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಸರ್ಕಾರದ ನಿಯಮಗಳಿಗೆ ಒಳಪಟ್ಟು ಹಿಂತಿರುಗುತ್ತಿದ್ದು, ಅವರಿಗೆ ಕ್ವಾರಂಟೈನ್ ಕೇಂದ್ರಗಳನ್ನು ಮಾಡಲು ಯಾವುದೇ ವ್ಯಕ್ತಿಗಳು ಪ್ರತಿಭಟನೆ ಅಥವಾ ವಿರೋಧ ವ್ಯಕ್ತಪಡಿಸಿದಲ್ಲಿ ಅಂತವರ ವಿರುದ್ದ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ದೇಶದ ಇತರೆ ರಾಜ್ಯಗಳಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳು ಪ್ರಸ್ತುತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಸರ್ಕಾರದ ನಿಯಮಗಳಿಗೆ ಒಳಪಟ್ಟು ಹಿಂತಿರುಗುತ್ತಿದ್ದು, ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಅಥವಾ ಇನ್ನಿತರ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ ಬಗ್ಗೆ  ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಊರಿಗೆ ಮರಳುತ್ತಿರುವವರು ನಿಮೂರಿನವರೇ ಆಗಿದ್ದು, ಎಲ್ಲರ ಹಿತದೃಷ್ಟಿಯಿಂದಲೇ ಜಿಲ್ಲಾಡಳಿತವು ಪ್ರತ್ಯೇಕವಾಗಿ ಅವರನ್ನು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲೇ ಇರಿಸಿಕೊಳ್ಳಬೇಕಾದ ನಿಯಮವಿದೆ ಹಾಗೂ ಅವರನ್ನು ಕರೆತರುವ ಸಮಯ ಎಲ್ಲ ರೀತಿಯ ಆರೋಗ್ಯ ತಪಾಸಣೆ ಮಾಡಲಾಗಿರುತ್ತದೆ. ಈ ಎಲ್ಲ ಪ್ರಕ್ರಿಯೆಗಳಿಗೆ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಂಪೂರ್ಣ ಸಹಕಾರ ನೀಡಲಿದ್ದು, ನಿಮ್ಮೆಲ್ಲರ ಹಿತದೃಷ್ಟಿಯಿಂದ ಕೇವಲ ನಿಗಾ ಇಡುವ ಸಲುವಾಗಿ ಕ್ವಾರಂಟೈನ್ ಮಾಡಲಾಗುತ್ತದೆಯೇಹೊರತು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.

ಇಂತಹ ಸಂದರ್ಭಗಳಲ್ಲಿ ಯಾರಿಂದಲಾದರೂ ಈ ಪ್ರಕ್ರಿಯೆ ವಿರುದ್ದ ಪ್ರತಿಭಟನೆ ಅಥವಾ ವಿರೋಧ ವ್ಯಕ್ತಪಡಿಸಿದಲ್ಲಿಅಂತವರ ವಿರುದ್ದ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love

Exit mobile version