Home Mangalorean News Kannada News “ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳನ್ನು ನೇರವಾಗಿ ಪಡೆಯುವಂತಿಲ್ಲ”

“ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳನ್ನು ನೇರವಾಗಿ ಪಡೆಯುವಂತಿಲ್ಲ”

Spread the love

“ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳನ್ನು ನೇರವಾಗಿ ಪಡೆಯುವಂತಿಲ್ಲ”

ಮ0ಗಳೂರು :- ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳು ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ರಕ್ಷಣೆಗೆ ದಾಖಲು ಮಾಡಬೇಕಿದ್ದು, ನೇರವಾಗಿ ಪಡೆಯಲು ಅರ್ಹತೆ ಇರುವುದಿಲ್ಲ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.

ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ ಕುಠೀರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, ಸೇರಿದಂತೆ(ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತುಪಡಿಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕೆಂದು ನಿರ್ದೇಶನವಿದೆ.

ಬಾಲನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆಯಡಿ ದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಯವರ ಕಛೇರಿ 2 ನೇ ಮಹಡಿ, ಮಂಗಳೂರು ಇವರನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸಬೇಕು. ಈಗಾಗಲೇ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿಯುವ ಮೂರು ತಿಂಗಳ ಮುಂಚಿತವಾಗಿ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಸೆಕ್ಷನ್ 42(1) ರನ್ವಯ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ರೂ. ಒಂದು ಲಕ್ಷ ದಂಡ ಅಥವಾ ಎರಡೂ ಶಿಕ್ಷೆ ವಿಧಿಸಲಾಗುವುದು.

ನೋಂದಾಯಿಸಲು ತಡ ಮಾಡಿದ್ದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾಧ ಎಂದು ಪರಿಗಣಿಸಲಾಗುವುದು. ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಮುಂದುವರೆದು ಒಂದು ವೇಳೆ ಮಕ್ಕಳ ಮೇಲಿನ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಫಿಸಿದ್ದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.


Spread the love

Exit mobile version