Home Mangalorean News Kannada News ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ

ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ

Spread the love

ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ

ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣ ಗುರುವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳಲ್ಲೂ ಸೈ ಎನಿಸಿಕೊಂಡಿದ್ರು. ಇನ್ನು 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನಗೆದ್ದಿದ್ದರು.


Spread the love

Exit mobile version