Home Mangalorean News Kannada News ಗಡಿಪ್ರದೇಶದಲ್ಲಿ ನಡೆಯುವ ಹಲ್ಲೆಗಳು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು : ಫಯಾಝ್ ದೊಡ್ಡಮನೆ ಆತಂಕ

ಗಡಿಪ್ರದೇಶದಲ್ಲಿ ನಡೆಯುವ ಹಲ್ಲೆಗಳು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು : ಫಯಾಝ್ ದೊಡ್ಡಮನೆ ಆತಂಕ

Spread the love

ಗಡಿಪ್ರದೇಶದಲ್ಲಿ ನಡೆಯುವ ಹಲ್ಲೆಗಳು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು : ಫಯಾಝ್ ದೊಡ್ಡಮನೆ ಆತಂಕ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ಕ ಜಿಲ್ಲಾ ವತಿಯಿಂದ ತಲಪಾಡಿಯಲ್ಲಿ ಅಮಾಯಕ ವಿದಾರ್ಥಿಗಳ ಮೇಲೆ ನಡೆದ ಹಲ್ಲೆಯ ವಿರುದ್ದ ಪ್ರತಿಭಟನೆಯನ್ನು ತಲಪಾಡಿ ಬಸ್ ನಿಲ್ದಾಣದ ಬಳಿ  ನಡೆಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷರಾದ ಇಮ್ರಾನ್ ಪಿಜೆ ಪ್ರಾಸ್ತವಿಕವಾಗಿ ಮಾತನಾಡಿ ಘಟನೆಗೆ ಸಂಬಂದಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದಂತ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಫಯಾಝ್ ದೊಡ್ಡಮನೆ ಮಾತನಾಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗಳು ಮಿತಿಮೀರುತ್ತಿದ್ದು ಭಯದ ವಾತಾವಾರಣ ನಿರ್ಮಾಣವಾಗಿದೆ. ಅದರಲ್ಲೂ ಕೇರಳ ಮೂಲದ ವಿದ್ಯಾರ್ಥಿಗಳನ್ನು ಗುರಿಪಡಿಸಲಾಗುತ್ತಿದೆ ಪರಿಣಾಮ ಇದು ಎರಡು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು ಅಲ್ಲದೆ ಸಂಬಂದಪಟ್ಟ ಜನಪ್ರತಿನಿಧಿಗಳು ಕೇವಲ ಮಸೀದಿ ಮಂದಿರಗಳನ್ನು ಸುತ್ತುವುದು ಬಿಟ್ಟು ತಮ್ಮ ಜವಾಬ್ದಾರಿಯನ್ನು ಅರಿತು ವಿದ್ಯಾರ್ಥಿಗಳ ನೋವನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವತ್ತ ಕಾರ್ಯೋನ್ಮುಖರಾಗಿ ಎಂದು ಸಲಹೆ ನೀಡಿದರು ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮಾತನಾಡಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ಕ್ಯಾಂಪಸ್ ಫ್ರಂಟ್ ಕಟಿಬದ್ದವಾಗಿದೆ ಎಂದು ಭರವಸೆ ನೀಡಿದರು ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾದಿಕ್ ಪುತ್ತೂರು, ಇಫಾಝ್ ಮತ್ತಿತ್ತರು ಉಪಸ್ಥಿತರಿದ್ದರು. ಸಾಹುಲ್ ಕೊಣಾಜೆ ಕಾರ್ಯಕ್ರಮವನ್ನು ನಿರೂಪಿಸಿದರು ನಿಝಾಮ್ ಸ್ವಾಗತಿಸಿ ವಂದಿಸಿದರು

ಬೇಡಿಕೆಗಳು:

  • ತಲಪಾಡಿಯಲ್ಲಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಗೂಂಡಾ ಖಾಯ್ದೆ ಪ್ರಕರಣವನ್ನು ದಾಖಲಿಸಬೇಕು
  • ತಲಪಾಡಿ ಸುಂಕ ವಸೂಲಾತಿ ಕೇಂದ್ರಕ್ಕೆ ಸಿ.ಸಿ ಕ್ಯಾಮೆರಾವನ್ನು ಅಳವಡಿಸಬೇಕು
  • ತಲಪಾಡಿ ಗಡಿನಾಡಿನಲ್ಲಿ ಖಾಯಂ ಪೋಲಿಸ್ ಕಾವಲು ನೀಡಬೇಕು.
  • ಬೋಂದೆಲ್ ಪ್ರದೇಶದಲ್ಲಿ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಜಾಮೀನು ರಹಿತ ಕೇಸನ್ನು ದಾಖಲಿಸಬೇಕು


Spread the love

Exit mobile version