ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಮಂಗಳೂರು: ನಗರದಲ್ಲಿ ಎಕಾನಾಮಿಕ್ & ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾದಕ ದ್ರವ್ಯಗಳ ಸಾಗಾಟ/ ಮಾರಾಟ ಮಾಡುವವರ ಪತ್ತೆಯ ಬಗ್ಗೆ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ ಬುಧವಾರ ಮಂಗಳೂರು ನಗರದ ಮಣ್ಣಗುಡ್ಡೆ ವೇರ್ ಹೌಸ್ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಆಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರು ಬಳ್ಳಾಲ್ ಬಾಗ್ ನಿವಾಸಿ ಕೆ.ಮಿಥುನ್ ಶೆಟ್ಟಿ (41) ಎಂದು ಗುರುತಿಸಲಾಗಿದೆ.
ಬಂಧಿತನಿಂದ ಸುಮಾರು 1 ಕೆಜಿ 300 ಗ್ರಾಂ ತೂಕದ 53000/- ರೂ ಮೌಲ್ಯದ ಗಾಂಜಾ ಯಮಹಾ RX-100 ಬೈಕ್ ಹಾಗೂ 1- ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಸ್ವಾಧೀನ ಪಡಿಸಿದ ಒಟ್ಟು ಸ್ವತ್ತುಗಳ ಮೌಲ್ಯ 90,000/- ಆಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಟಿ.ಆರ್. ಸುರೇಶ್ ರವರ ಆದೇಶದಂತೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹನುಮಂತರಾಯ ಅವರ ನಿರ್ದೇಶನದಂತೆ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ, ಪತ್ರಾಂಕಿತ ಅಧಿಕಾರಿಯಾದ, ಕೇಂದ್ರ ಉಪ ವಿಭಾಗದ ಎಸಿಪಿ ಭಾಸ್ಕರ ಒಕ್ಕಲಿಗ ಇವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್, ಪೊಲೀಸ್ ಸಿಬ್ಬಂದಿಗಳಾದ ಎ.ಎಸ್.ಐ ಶ್ಯಾಮ್ ಸುಂದರ್, ಲಕ್ಷ್ಮೀಶ, ಜಗದೀಶ್, ಶಾಜು ನಾಯರ್, ಪ್ರಶಾಂತ್ ಶೆಟ್ಟಿ ಜಾಯ್ಸ್ ಡಿಸೋಜ, ಕಿಶೋರ್ ಪೂಜಾರಿ, ಹಾಗೂ ಭಾಸ್ಕರ್ ರವರು ಕಾರ್ಯಾರಣೆಯಲ್ಲಿ ಭಾಗವಹಿಸಿರುತ್ತಾರೆ.