Home Mangalorean News Kannada News ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

Spread the love

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

ಮಂಗಳೂರು : ಮಂಗಳೂರು ನಗರ ಪದವು ಗ್ರಾಮದ ಶಕ್ತಿನಗರದ ನಾಲ್ಯ ಪದವು ಮೈದಾನದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ NDPS ಕಾಯ್ದೆಯಡಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಂಧಿತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವಿಷ್ಣು ಕುಮಾರ್ (27) ಮತ್ತು ಶಕೀರ್ (23) ಎಂದು ಗುರುತಿಸಲಾಗಿದೆ. ಬಂಧಿತರು ಮೂಲತಃ ಕೇರಳರಾಜ್ಯದವರು.

ಈ ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅಶೋಕ್ ರವರ ನೇತೃತ್ವದಲ್ಲಿ ಪಿ. ಎಸ್. ಐ. ಜಾನಕಿ ಹಾಗೂ ಠಾಣಾ ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ.


Spread the love

Exit mobile version