Spread the love
ಗುರುಪುರ ಸೇತುವೆ ಉದ್ಘಾಟನೆಗೆ ಸಿದ್ದ: ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು: ಮಂಗಳೂರಿನ ಗುರುಪುರ ಸೇತುವೆ ಉದ್ಘಾಟನೆಗೆ ಸಿದ್ದಗೊಂಡಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಪರಿಶೀಲನೆ ನಡೆಸಿದರು.
ಮಂಗಳೂರು ಮೂಡಬಿದ್ರೆ ರಸ್ತೆಯಲ್ಲಿ ಸಿಗುವ ಗುರುಪುರದಲ್ಲಿ ಇರುವ ಸೇತುವೆ ಶಿಥಿಲಾವಸ್ಥೆ ತಲುಪಿರುವುದರಿಂದ ಹೊಸಸೇತುವೆ ಕಾಮಗಾರಿ ಆರಂಭವಾಗಿತ್ತು.
40 ಕೋಟಿ ರೂ. ಅಂದಾಜು ವೆಚ್ಚದ ಹೊಸ ಸೇತುವೆ ಯೋಜನೆಯಲ್ಲಿ 25 ಮೀ. ಉದ್ದದ ಏಳು ಅಂಕಣಗಳಿವೆ. ಎರಡೂ ಕಡೆ ಸೇತುವೆಯ ಅಗಲ 16 ಮೀ. ಸೇತುವೆ ರಸ್ತೆ ಅಗಲ 11 ಮೀ., ಕಾಲುದಾರಿ ಅಗಲ 2.50 ಮೀ., ಫೈಲ್ ಫೌಂಡೇಶನ್, ಮೇಲ್ಕಟ್ಟಡಕ್ಕೆ ಪಿಎಸ್ಸಿ ಗರ್ಡರ್ ಬೀಮ್ ಮತ್ತು ಸ್ಪ್ಯಾಬ್, ಎರಡೂ ಕಡೆ ಕೂಡು ರಸ್ತೆ ತಲಾ 500 ಮೀ. ನಿರ್ಮಾಣವನ್ನು ಇದು ಒಳಗೊಂಡಿದೆ.
ಗುರುಪುರ ಸೇತುವೆ ಕಾಮಗಾರಿ ಶೀಘ್ರ ಮುಗಿದಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಪರಿಶೀಲನೆ ನಡೆಸಿದರು.
Spread the love