Spread the love
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್
ಬೆಂಗಳೂರು: ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.
Spread the love