ಗೆದ್ದು ಶಾಸಕನಾಗಿ ಅಧಿಕಾರ ಸ್ವೀಕರಿಸುವ ಮೊದಲೇ ಕಾರ್ಯಕರ್ತರ ರಕ್ಷಣೆಗೆ ಮುಂದಾದ ವೇದವ್ಯಾಸ ಕಾಮತ್
ಮಂಗಳೂರು: ಚುನಾವಣಾ ವಿಜಯೋತ್ಸವ ವೇಳೆ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಸಂಧರ್ಭದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಬಗ್ಗೆ ಸುದ್ಧಿ ತಿಳಿಯುತ್ತಿದ್ದಂತೆ ಸ್ಥಿತಿ ಗತಿ ಪರಿಶೀಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ವಿಜಯೀ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ರಾತೋ ರಾತ್ರಿ ವಿಜಯೋತ್ಸವ ಆಚರಣೆ ಬಿಟ್ಟು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ತೆರಳಿದರು.
ನಡೆದ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡ ಕಾಮತ್ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿದ್ದಲ್ಲದೇ ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರನ್ನು ಬಂಧಿಸುವಂತೆ ಪೋಲೀಸರಿಗೆ ಸೂಚನೆ ನೀಡಿದರು.
ತಾನು ಕಾರ್ಯಕರ್ತರಿಗೆ ಯಾವುದೇ ರೀತಿಯ ಅನ್ಯಾಯ, ತೊಂದರೆ ಆದರೆ ಸಹಿಸುವುದಿಲ್ಲ, ತಪ್ಪಿತಸ್ಥರಿಗೆ ಕಾನೂನು ರೀತ್ಯಾ ಶಿಕ್ಷೆ ಕೊಡಿಸಿಯೇ ಸಿದ್ಧ ಅಂತ ಈ ಸಂಧರ್ಭದಲ್ಲಿ ಹೇಳಿದರು.ಹಿಂದೆ ಆಢಳಿತದಲ್ಲಿದ್ದ ಕಾಂಗ್ರೆಸ್ ಸರಕಾರದಲ್ಲಿ ನಡೆಯುತ್ತಿದ್ದ ಗೂಂಡಾಗಿರಿಗೆ ದಕ್ಷಿಣ ಕನ್ನಡದಲ್ಲಿ ಇನ್ನು ಮುಂದೆ ಅವಕಾಶ ಇಲ್ಲ ಎಂಬುವುದನ್ನು ಮತಾಂಧರು ಮರೆಯಬಾರದು ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ನೇರವಾಗಿ ಎಚ್ಚರಿಕೆ ನೀಡಿದರು.