ಗೌರಿ ಗಣೇಶ ಹಬ್ಬ – ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ

Spread the love

ಗೌರಿ ಗಣೇಶ ಹಬ್ಬ – ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ

ಮಂಗಳೂರು : ಮುಂಬರುವ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿ.ಒ.ಪಿ ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಬರ್ಂಧಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆಯನ್ನು ಹೊರಡಿಸಿದೆ.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ಹಾಗೂ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ನಿರ್ದಿಷ್ಟ ಜಲಮೂಲಗಳ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಂಕ್ ಗಳಲ್ಲಿ/ಕಲ್ಯಾಣಿಗಳಲ್ಲಿ ಹಸಿಕಸ (ಹೂವು ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಸಮೇತ ಮೂರ್ತಿಗಳನ್ನು ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

ಗರಿಷ್ಟ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿಸಲಾಗಿದೆ. (ಮೂರ್ತಿಗಳ ಸರಾಸರಿ ತೂಕ, ಬಿರುಕು , ಸಾಗಾಣಿಕೆ ಹಾಗೂ ತ್ಯಾಜ್ಯ ಉತ್ಪನ್ನ ಪರಿಗಣಿಸಿ ಈ ಕ್ರಮ ಶಿಫಾರಸ್ಸು ಮಾಡಲಾಗಿದೆ.) ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಬಣ್ಣ ಲೇಪಿತ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜನೆ ಮಾಡಿದಲ್ಲಿ ಬಣ್ಣ ಲೇಪಿತ ವಿಗ್ರಹಗಳ ವಿಷಕಾರಿ ಅಂಶಗಳು ನೀರಿನ ಜೊತೆಗೆ ಸೇರಿ ಕಲುಷಿತವಾಗುವ ಎಲ್ಲಾ ಸಾಧ್ಯತೆಗಳಿದ್ದು ಇದನ್ನು ಸಂಪೂರ್ಣವಾಗಿ ನಿಬರ್ಂದಿಸಲಾಗಿದೆ.

ಈ ಹಿನ್ನಲೆಯಲ್ಲಿ ಮುಂಬರುವ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲಾಡಳಿತವು ಸಾರ್ವಜನಿಕರಿಗೆ ಶುಭಾಶಯಗಳನ್ನು ಕೋರುತ್ತಾ ಸಾರ್ವಜನಿಕರಿಂದ ಸ್ವಚ್ಛ ಪರಿಸರವನ್ನು ಕಾಯ್ದುಕೊಳ್ಳಲು ಸಹಕರಿಸಲು ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love