ಗೌರಿ ಲಂಕೇಶ್ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ

Spread the love

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ

ಉಡುಪಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲೆಯ ಪತ್ರಕರ್ತುರ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಪತ್ರಕರ್ತರು ಭೀತಿಯ ವಾತಾವರಣದಲ್ಲಿ ಕೆಲಸ ನಿರ್ವಹಿಸುವ ಸ್ಥಿತಿ ನಿರ್ಮಾಣವಾಗಿದ್ದು, ಸರಕಾರ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವುದರೊಂದಿಗೆ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಸಂಘದ ಮಾಜಿ ಅಧ್ಯಕ್ಷ ಕಿರಣ್ ಮಂಜನಬೈಲ್ ಮಾತನಾಡಿ ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಗುಂಡು ಉತ್ತರವಾಗುವುದಿಲ್ಲ. ಸಂವಿಧಾನಾತ್ಮಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾವುದೇ ಹತ್ಯೆಯ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಸರಕಾರ ಕೊಲೆಗಡುಕರನ್ನು ಶೀಘ್ರವೇ ಬಂಧಿಸಿಬಬೇಕು ಎಂದು ಆಗ್ರಹಿಸಿದರು.

ಪತ್ರಕರ್ತ ದೀಪಕ್ ಜೈನ್ ಮಾತನಾಡಿ ವೈಚಾರಿಕ ಸಿದ್ದಾಂತ ಭೇದಗಳಿಗೆ ಗುಂಡು ಉತ್ತರವಾಗುವುದಿಲ್ಲ. ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ಖಂಡನೀಯ. ಪೋಲಿಸ್ ಹಾಗೂ ಸರಕಾರ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಗಣೇಶ್ ಪ್ರಸಾದ್ ಪಾಂಡೇಲು, ರಾಜೇಶ್ ಶೆಟ್ಟಿ, ನಝೀರ್ ಪೋಲ್ಯ, ಹಿರಿಯ ಪತ್ರಕರ್ತರಾದ ಬಿ ಬಿ ಶೆಟ್ಟಿಗಾರ್, ಗಣೇಶ್ ಪ್ರಭು, ಶಶಿಧರ ಮಾಸ್ತಿಬೈಲ್, ಸುಭಾಶ್ಚಂದ್ರ ವಾಗ್ಳೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love