Home Mangalorean News Kannada News ಗ್ರಾಮೀಣ ಭಾಗದ ಪ್ರತೀ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ – ಜಿ.ಪಂ. ಸಿಇಓ  ಡಾ. ಸೆಲ್ವಮಣಿ 

ಗ್ರಾಮೀಣ ಭಾಗದ ಪ್ರತೀ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ – ಜಿ.ಪಂ. ಸಿಇಓ  ಡಾ. ಸೆಲ್ವಮಣಿ 

Spread the love

ಗ್ರಾಮೀಣ ಭಾಗದ ಪ್ರತೀ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ – ಜಿ.ಪಂ. ಸಿಇಓ  ಡಾ. ಸೆಲ್ವಮಣಿ 

ಮಂಗಳೂರು: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಿಂದ ಗ್ರಾಮೀಣದ ಪ್ರತೀ ಮನೆಗೆ ನಳ್ಳಿ ನೀರಿನ ಸಂಪರ್ಕವನ್ನು ಒದಗಿಸುವ ಯೋಜನೆಯು ಪ್ರಾರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಈಗಾಗಲೇ ಸರ್ವೆ ನಡೆಸಿದ್ದು, ಆದಷ್ಟು ಶ್ರೀಘದಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸುತ್ತವಾಗಿ 74 ಗ್ರಾಮ ಪಂಚಾಯತ್‍ನಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಇದರ ವೆಚ್ಚವನ್ನು ಕೇಂದ್ರ ಸರ್ಕಾರ ಶೇಕಡಾ 45 ರಷ್ಟು ಮತ್ತು ರಾಜ್ಯ ಸರ್ಕಾರ 45 ರಷ್ಟು ಹಾಗೂ ಸಾರ್ವಜನಿಕ ಚಂದಾದಾರರು ಶೇಕಡಾ 10 ರಷ್ಟು ವೆಚ್ಚವನ್ನು ಪಾವತಿಸಬೇಕಾಗುತ್ತದೆ. ಜಲಜೀವನ ಮಿಷನ್‍ನಿಂದ ಗ್ರಾಮೀಣ ಸಮುದಾಯದ ಪ್ರತಿ ಮನೆಗೆ ಗುಣಮಟ್ಟದ ಆಧಾರಿತ ನೀರನ್ನು ಪ್ರತಿದಿನ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು. ಯೋಜನೆ ಅನುಷ್ಠಾನಕ್ಕೆ ಕ್ರಿಯಾ ಯೋಜನೆಯನ್ನು ಗ್ರಾಮಸಭೆಗಳಲ್ಲಿ ಅನುಮೋದನೆ ಪಡೆದುಕೊಳ್ಳಲಾಗುವುದು. 2024ರೊಳಗೆ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ನೀಡುವುದು ಇದರ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಕಾರ್ಯಕಾರಿ ಅಭಿಯಂತರ ನರೇಂದ್ರ ಬಾಬು, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರಾಜೇಶ್, ಸಾರ್ವಜಿನಿಕ ಶಿಕ್ಷ್ಪ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

Exit mobile version