Home Mangalorean News Kannada News ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡಿಕೆ

ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡಿಕೆ

Spread the love

ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡಿಕೆ

ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತgದÀ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version