Home Mangalorean News Kannada News ಗ್ರಾಮ ಪಂಚಾಯತ್ ಚುನಾವಣೆ ; ಕೊಕ್ಕರ್ಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಗ್ರಾಮ ಪಂಚಾಯತ್ ಚುನಾವಣೆ ; ಕೊಕ್ಕರ್ಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

Spread the love

ಗ್ರಾಮ ಪಂಚಾಯತ್ ಚುನಾವಣೆ ; ಕೊಕ್ಕರ್ಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಉಡುಪಿ: ಕೊಕ್ಕರ್ಣೆ ಗ್ರಾಮ ಪಂಚಾಯತ್ ಚುನಾವಣೆ 2020 ಇದರ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯು ಮಾಜಿ ಸಚಿವರಾದ  ಪ್ರಮೋದ್ ಮಧ್ವರಾಜ್ ಅವರ ಉಪಸ್ಥಿತಿಯಲ್ಲಿ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು.

ಮುಂಬರುವ ಗ್ರಾಮಪಂಚಾಯತ್ ಚುನಾವಣೆಯ ಪ್ರಯುಕ್ತ ಕೊಕ್ಕರ್ಣೆ ಭಾಗದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವ ಭಾವಿ ಸಭೆ ಶನಿವಾರ ಕೊಕ್ಕರ್ಣೆ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹಿಂದಿನ ಕಾಂಗ್ರೆಸ್ ಸರಕಾರ ನೀಡಿದ ಜನಪರ ಕಾರ್ಯಕ್ರಮಗಳನ್ನು ಇಂದಿಗೂ ಕೂಡ ಜನರು ಮರೆತಿಲ್ಲ. ಅವುಗಳ ಪ್ರಚಾರವನ್ನು ಮಾಡುವತ್ತ ಕಾಂಗ್ರೆಸ್ ಕಾರ್ಯಕರ್ತರು ಅತಿ ಹೆಚ್ಚು ಗಮನಹರಿಸಬೇಕು ಅಲ್ಲದೆ ಬಿಜೆಪಿ ಪಕ್ಷದ ಜನವಿರೋಧಿ ನೀತಿಗಳನ್ನು ಜನರಿಗೆ ಮನದಟ್ಟು ಮಾಡುವುದರ ಮೂಲಕ ಈ ಬಾರಿಯ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲು ಕೈಜೋಡಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಬ್ರಹ್ಮಾವರ ಬ್ಲಾಕ್ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಜನರಿಗೆ ಅರಿವು ಮೂಡಿಸುವ ಕೆಲಸ ನಡೆಯಬೇಕು. ಬಿಜೆಪಿ ಪಕ್ಷ ಸುಳ್ಳು ಆಶ್ವಾಸನೆಗಳನ್ನು ನೀಡಿದ್ದು ಬಿಟ್ಟರೆ ಬೇರೆನೂ ಸಾಧನೆ ಮಾಡಿಲ್ಲ ಎನ್ನುವುದು ಜನರಿಗೆ ಮನದಟ್ಟಾಗುತ್ತಿದೆ. ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬರುವುದು ಖಂಡಿತ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಬ್ಲಾಕ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮಾತನಾಡಿ ಕಾರ್ಯಕರ್ತರು ಗ್ರಾಮಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ಡಾ|ಸುನೀತಾ ಶೆಟ್ಟಿ ಕೂಡ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಪ್ರಮೋದ್ ಮಧ್ವರಾಜ್ ಚಾಲನೆ ನೀಡಿದರು.
ಸಭೆಯಲ್ಲಿ ನಾಯಕರಾದ ವೆಂಕಟೇಶ್ ಸುವರ್ಣ, ಯುವ ಕಾಂಗ್ರೆಸ್ ನ ರಾಘವೇಂದ್ರ ಶೆಟ್ಟಿ, ಗುರುಪ್ರಸಾದ್, ಸದಾಶಿವ ನಾಯಕ್, ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

Exit mobile version