Home Mangalorean News Kannada News ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

Spread the love

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ಮೂವರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ   ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ.

ರಂಜಿತ್(27), ರಮ್ಯಾ(24), ಅಭಿಲಾಶ್(21) ಮೃತ ದುರ್ದೈವಿಗಳು.

ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಗಳು ಊಟಕ್ಕೆ ಸೇರಿದ್ದರು. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದಾರೆ. ಆದರೆ ಆಳ ಅರಿಯದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ರಾಮನಗರ ಮೂಲದ ರಮ್ಯಾ, ಚಂದಪುರ ಮೂಲದ ಅಭಿಲಾಷ್ ಮತ್ತು ಶ್ರೀನಿವಾಸಪುರ ಮೂಲದ ಎಸ್. ರಂಜೀತ್ ಕುಮಾರ್​ ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ಮೂವರು ಆಗಮಿಸಿದ್ದಾಗ ಅವಘಡ ಸಂಭವಿಸಿದೆ.

 ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಲ್ ಚೌಕ್ಸೆ, ಎಎಸ್ಪಿ ಆರ್.ಐ ಖಾಸಿಂ, ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

Exit mobile version