ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ: ನಿರ್ಮಲಾ, ವಿಜಯೇಂದ್ರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಚುನಾವಣೆ ಬಾಂಡ್‌ಗಳ ಮೂಲಕ ಉದ್ಯಮಿಗಳಿಂದ ಸುಲಿಗೆ ಮಾಡಲಾಗಿದೆ ಎಂಬ ಆರೋಪದಡಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಇತರೆ ಮುಖಂಡರ ವಿರುದ್ಧ ತಿಲಕ್‌ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಪೊಲೀಸರು ತನಿಖೆ ಕೈಗೊಂಡಿದ್ಧಾರೆ. ಆದರ್ಶ್ ಆರ್. ಐಯ್ಯರ್ ಅವರು ನೀಡಿದ್ದ ಖಾಸಗಿ ದೂರನ್ನು ಆಧರಿಸಿ ನ್ಯಾಯಾಲಯವು ಎಫ್‌ಐಆರ್ ದಾಖಲಿಸಲು ಸೂಚಿಸಿತ್ತು.
ಸುಮಾರು ₹ 8 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಕಾನೂನು ಬಾಹಿರ ಹಾಗೂ ಬಲವಂತದಿಂದ ಉದ್ಯಮಿಗಳು ಹಾಗೂ ಕಂಪನಿಗಳಿಂದ ಸುಲಗೆ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.