ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ – ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಸಂಪತ್ತಿನ ಸಮಾನ ಹಂಚಿಕೆ ಎಂಬುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಲೆಂದೇ ಈ ಬಜೆಟ್ ತಯಾರಿಗೊಳಿಸಲಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಎಂದು ಕೇಂದ್ರ ಸರ್ಕಾರದೆದುರು ವಾದ ಮಂಡಿಸಿದವರು ಇಂದು ಉಡುಪಿ ಜಿಲ್ಲೆಯ ತೆರಿಗೆಯ ಪಾಲನ್ನು ಸರಿಯಾದ ಕ್ರಮದಲ್ಲಿ ನಮ್ಮ ಜಿಲ್ಲೆಗೆ ಹಿಂತಿರುಗಿಸಿಲ್ಲ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ.
ಚುನಾವಣೆಯು ಹತ್ತಿರದಲ್ಲಿರುವಾಗ ಮೋದಿ ಸರ್ಕಾರವನ್ನು ದೂಷಿಸಿ ಮಂಡಿಸಿ ಮಂಡಿಸಿದ ಬಜೆಟ್ ಇದಾಗಿದೆ ಗ್ಯಾರಂಟಿ ಯೋಜನೆಗಳಿಂದ ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ರಾಜ್ಯದ ಜನರ ಮೇಲೆ ಸಿದ್ದರಾಮಯ್ಯ ತೆರಿಗೆಯ ಬರೆ ಹಾಕಿದ್ದಾರೆ. ಈ ಸರ್ಕಾರದಲ್ಲಿ ಎಲ್ಲವೂ ಏರುತ್ತಿದೆ. ಜನಸಾಮಾನ್ಯರ ಬದುಕಿಗೆ ಯಾವುದೇ ರೀತಿಯಲ್ಲೂ ಸಹಕಾರಿಯಾಗಿಲ್ಲ ಎಂದು ಹೇಳಿದರು.