ಜನಾರ್ದನ ಪೂಜಾರಿ ಕುಟುಂಬದವರ ಆರೋಗ್ಯಕ್ಕಾಗಿ ಕುದ್ರೋಳಿ ದೇವಳದಲ್ಲಿ ಮಾಜಿ ಶಾಸಕ ಜೆ ಆರ್ ಲೋಬೊ ಪ್ರಾರ್ಥನೆ
ಮಂಗಳೂರು: ಮಾಜಿ ಕೇಂದ್ರ ವಿತ್ತ ಸಚಿವರು ಕಾಂಗ್ರೆಸ್ ನ ಹಿರಿಯ ನಾಯಕರಾದ ಜನಾರ್ಧನ ಪೂಜಾರಿ ಮತ್ತು ಕುಟುಂಬಸ್ಥರಿಗೆ ಕೊರೊನ ಪಾಸಿಟಿವ್ ಬಂದಿರುವುದರಿಂದ ಅವರು ಶೀಘ್ರವಾಗಿ ಗುಣಮುಖರಾಗಲಿ ಮತ್ತು ಈ ದೇಶದ ಜನತೆ ಕೊರೊನ ಮಹಾಮಾರಿಯಿಂದ ಮುಕ್ತವಾಗಲಿ ಎಂದು ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆದ ಸಿಯಾಳ ಅಭಿಷೇಕ ಹಾಗೂ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನ ಸಮಸ್ತ ಜನತೆಯ ಉತ್ತಮ ಅರೋಗ್ಯಕ್ಕಾಗಿ ಮಾಜಿ ಶಾಸಕರಾದ ಜೆ.ಆರ್. ಲೋಬೊರವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಆ ವೇಳೆಯಲ್ಲಿ ಅವರಿಗೆ ವರದಿ ಪಾಸಿಟಿವ್ ಬಂದಿದೆ. ಅಲ್ಲದೇ ಅವರ ಪತ್ನಿಗೂ ಸೋಂಕು ತಗುಲಿದೆ . ಸದ್ಯ ಮಾಜಿ ಸಚಿವರು ಮತ್ತು ಅವರ ಪತ್ನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.