ಜಾತಿ ಸಮೀಕ್ಷೆ ಆಧಾರದಲ್ಲಿ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಕ್ರಮ
ಉಡುಪಿ: ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಉದ್ಘಾಟನಾ ಸಮಾರಂಭ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು,
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬ್ರಾಹ್ಮಣ ಸಮಾಜ ಸಂಸ್ಕೃತಿ ಮೌಲ್ಯಗಳನ್ನು ಉಳಿಸಿಕೊಳ್ಳುವುದರೊಂದಿಗೆ ಪ್ರಸ್ತುತ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯುವುದು ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಲ್ಲರೂ ತಮ್ಮ ಹಕ್ಕನ್ನು ಸ್ಥಾಪನೆ ಮಾಡಬೇಕಾಂದರೆ ಮೊದಲು ಸಂಘಟಿತರಾಗಬೇಕು. ಬ್ರಾಹ್ಮಣ ಸಮಾಜ ಎಲ್ಲಾ ಸಮಾಜದ ಬಗ್ಗೆ ಚಿಂತನೆ ಮಾಡುವ ಸಮಾಜವಾಗಿದ್ದು ಅದೇ ರೀತಿ ನಮ್ಮ ಸಮಾಜದ ಜನರಿಗೆ ಸಹಾಯ, ರಕ್ಷಣೆ ಒದಗಿಸುವ ಕೆಲಸವನ್ನೂ ಕೂಡ ನಾವು ಮಾಡಬೇಕಾಗಿದೆ.
ಜಾತಿಗಳ ಆರ್ಥಿಕ ಸ್ಥಿತಗತಿಗಳ ಕುರಿತು ನಡೆಸಿರುವ ಸಮೀಕ್ಷೆಯ ವರದಿಯು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಮಂಡನೆಯಾಗಲಿದ್ದು, ಇದರಿಂದ ಪ್ರತಿಯೊಂದು ಜಾತಿಗಳ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಯ ಮಟ್ಟ ಹೊರಬರಲಿದ್ದು, ಆ ಸಮೀಕ್ಷೆಯ ಆಧಾರದಲ್ಲಿ ಎಲ್ಲಾ ಸಮಾಜದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
ಬ್ರಾಹ್ಮಣ ಸಮಾಜ ಸರಕಾರದ ಮೇಲೆ ಬಹಳ ನಿರೀಕ್ಷಯನ್ನು ಇಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಹೇಳಿದರು.
ಮಹಾಸಭಾದ ಉದ್ಘಾಟನೆಯನ್ನು ಪರ್ಯಾಯ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನೆರವೇರಿಸದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾಧ ಅಧ್ಯಕ್ಷ ಎಂ ಮಂಜುನಾಥ್ ಉಪಾಧ್ಯ ವಹಿಸಿದ್ದರು. ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ, ಶಿವಮೊಗ್ಗ ಶಾಸಕ ಪ್ರಸನ್ನ ಕುಮಾರ್, ಮಾಜಿ ಶಾಸಕ ರಘುಪತಿ ಭಟ್, ಹಾಗೂಇನ್ನಿತರರು ಉಪಸ್ಥಿತರಿದ್ದರು.