ಜಾತ್ಯಾತೀತ ಯುವ ಜನತಾದಳ ರಾಜ್ಯಧ್ಯಕ್ಷರಾಗಿ ಮಧು ಬಂಗಾರಪ್ಪ ಪುನರಾಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಯುವ ಜನತಾದಳ ಜಾತ್ಯಾತೀತ ಘಟಕದ ಅಧ್ಯಕ್ಷರಾಗಿ ಶಾಸಕ ಮಧು ಬಂಗಾರಪ್ಪ ಅವರು ಪುನರಾಯ್ಕೆಗೊಂಡಿದ್ದಾರೆ.
ಶನಿವಾರ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿ ಜೆಪಿ ಭವನದಲ್ಲಿ ಜಾತ್ಯತೀತ ಯುವ ಜನತಾದಳ ಘಟಕದ ರಾಜ್ಯ ಕಾರ್ಯಕಾರಿಣಿ ಸಭೆ ಜರುಗಿದ್ದು ಸಭೆಯಲ್ಲಿ ಮಧು ಬಂಗಾರಪ್ಪ ಅವರು ರಾಜ್ಯ ಯುವ ಜನತಾದಳ ಜಾತ್ಯಾತೀತ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು.
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ಅವರು ರಾಜ್ಯದ ಜನತೆ ಪ್ರಾದೇಶಿಕ ಪಕ್ಷದತ್ತ ಹೆಚ್ಚಿನ ಒಲವು ತೋರುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದಾದ್ಯಂತ ಯುವ ಘಟಕಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಇದರೊಂದಿಗೆ ರಾಜ್ಯದಾದ್ಯಂತ ಜೆಡಿಎಸ್ ಪಕ್ಷದ ಸಂಘಟನೆ ಮಾಡುವತ್ತ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಪಕ್ಷ ಸಂಘಟನೆ ಯುವ ಜನತಾದಳದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.