ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಪ್ರೌಢ ಶಾಲೆಗೆ ಬಹುಮಾನ
ಕುಂದಾಪುರ: ಇತ್ತೀಚೆಗಷ್ಟೆ ಕಾರ್ಕಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೀನಿಧಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಯಕ್ಷಗಾನ ಸ್ಪರ್ಧೆಯಲ್ಲಿ ಯುವರಾಜ್ ಸಮಧಾನಕರ ಬಹುಮಾನ ಪಡೆದುಕೊಂಡಿದ್ದಾರೆ.
ಬಹುಮಾನ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಮುಖೋಪಾಧ್ಯಾಯ ಬಿ. ಮೋಹನ್‍ದಾಸ್ ಶೆಟ್ಟಿ, ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.