Home Mangalorean News Kannada News ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ – ದಕ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್...

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ – ದಕ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

Spread the love

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ – ದಕ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈ ಗೊಂಡು ಈ ಅಕ್ರಮ ಮರಳುಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಜಿಲ್ಲೆಯ ಜನರಿಗೆ ಮರಳು ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾ ಜೆಡಿಎಸ್ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಿಆರ್ ಝೆಡ್ ಪ್ರದೇಶದಲ್ಲಿ ಮರಳು ಗಾರಿಕೆ ನಡೆಯಲು ಅವಕಾಶ ನೀಡಿಲ್ಲ. ಆದರೆ ಕಾನೂನು ಬಾಹಿರವಾಗಿ ಮರಳುಗಾರಿಕೆ ಜಿಲ್ಲೆಯಲ್ಲಿ ನಡೆಯುತ್ತಿದೆ. ಜಿಲ್ಲೆಯ ಕೂಳೂರು, ವಳಚ್ಚಿಲ್, ಅಡ್ಯಾರ್, ಫರಂಗಿಪೇಟೆ, ಮರವೂರು, ಕಲ್ಪಾಪು, ಅಶೋಕನಗರ ಭಾಗಗಳಲ್ಲಿ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ.

ನಾನ್ ಸಿಆರ್ ಝೆ ಡ್ ಪ್ರದೇಶದಲ್ಲಿ ಮರಳು ಗಾರಿಕೆಗೆ ಟೆಂಡರ್ ಆಗಿದ್ದರೂ ಕೂಡ ತಾಂತ್ರಿಕ ಬಿಡ್ ತೆರೆಯದೆ ಇರುವುದರಿಂದ ಮರಳುಗಾರಿಕೆ ಪ್ರಾರಂಭವಾಗಿಲ್ಲ ಆದರೆ ಅಕ್ರಮವಾಗಿ ಮರಳು ಗಾರಿಕೆ ನಿರಂತರವಾಗಿ ನಡೆಯುತ್ತಿರುವುದು ವ್ಯಾಪಕ ಭ್ರಷ್ಟಾ ಚಾರಕ್ಕೆ ಕಾರಣವಾಗಿದೆ ಎಂದರು.

ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಂಡರೆ ಜಿಲ್ಲೆಯಲ್ಲಿ ಮನೆ ನಿರ್ಮಿಸಲು ಮಿತದರದಲ್ಲಿ ಮರಳು ದೊರೆಯುವ ಮೂಲಕ ಜನರಿಗೆ ಸಹಕಾರಿಯಾಗಲಿದೆ. ಸರಕಾರಕ್ಕೆ ಇದರಿಂದ ನಿಗದಿತ ಆದಾಯವೂ ದೊರೆಯಲಿದೆ. ಆದರೆ ಈಗ ಜಿಲ್ಲೆಯಲ್ಲಿ ನಡೆಯತ್ತಿರುವ ಅಕ್ರಮ ಮರಳುಗಾರಿಕೆಯಿಂದ ಸಾಕಷ್ಟು ಅವ್ಯವಹಾರಕ್ಕೆ ಕಾರಣವಾಗಿದೆ. ಅಲ್ಲದೆ ಸಣ್ಣ ನೀರಾವರಿ ಇಲಾಖೆಯಲ್ಲಿ ಕೂಡ ಮರಳುಗಾರಿಕೆ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಹೇಳಿದರು

ಜಿಲ್ಲೆಯಲ್ಲಿ ನ್ಯಾಯುತ ಮರಳುಗಾರಿಗೆ ಅವಕಾಶ ನೀಡದಿದ್ದರೆ, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳದಿದ್ದರೆ ಕೇಂದ್ರ ಸಚಿವರು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಯುವ ಜೆಡಿಎಸ್ ಮುಖಂಡರಾದ ರತೀಶ್,ಸತ್ತಾರ್, ಹಿತೈಷ್ ರೈ,ಆಸಿಫ್,ನಿತೇಶ್ ಮೊದಲಾದ ವರು ಉಪಸ್ಥಿತರಿದ್ದರು.


Spread the love

Exit mobile version