ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳ ಉಪ ಚುನಾವಣೆ ಮುಂದೂಡಿಕೆ:ಜಿಲ್ಲಾಧಿಕಾರಿ
ಮಂಗಳೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜರುಗಿಸಲು ರಾಜ್ಯ ಚುನಾವಣೆ ಆಯೋಗವು ಆದೇಶಿಸಿ ವೇಳಾಪಟ್ಟಿಯೊಂದಿಗೆ ಸೂಚಿಸಿತ್ತು.
ಆದರೆ ರಾಜ್ಯ ಚುನಾವಣೆ ಆಯೋಗವು ಸದರಿ ಗ್ರಾಮ ಪಂಚಾಯತ ಉಪ ಚುನಾವಣೆಗಳನ್ನು 15 ದಿನಗಳ ಮಟ್ಟಿಗೆ ಮುಂದೂಡಿ ಇಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವಿವಿಧ ಗ್ರಾ.ಪಂ.ಗಳ 9 ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.