ಜಿಲ್ಲೆಯಲ್ಲಿ 77722 ಮಕ್ಕಳಿಗೆ ಪೋಲಿಯೋ ಹನಿ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

Spread the love

ಜಿಲ್ಲೆಯಲ್ಲಿ 77722 ಮಕ್ಕಳಿಗೆ ಪೋಲಿಯೋ ಹನಿ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಉಡುಪಿ :ಜಿಲ್ಲೆಯಲ್ಲಿ ಫೆಬ್ರವರಿ 3 ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 77722 ಮಕ್ಕಳಿಗೆ ಪೋಲಿಯೋ ನೀಡುವ ಗುರಿ ಇದ್ದು, 677 ಬೂತ್ಗಳನ್ನು ತೆರೆಯಲಾಗುವುದು ಎಂದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈ ಬಾರಿ ಫೆಬ್ರವರಿ 3 ರಂದು ಒಂದೇ ಹಂತದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಮಗು ಪೊಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕಾರ್ಯ ನಿರ್ವಹಿಸುವಂತೆ ಹಾಗೂ ವಲಸೆ ಕಾರ್ಮಿಕರ ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಗಮನ ಹರಿಸಿ, ಅಲ್ಲಿನ ಮಕ್ಕಳಿಗೆ ಲಸಿಕೆ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಇಲಾಖೆಗಳು ಕಾರ್ಯಕ್ರಮಕ್ಕೆ ಸೂಕ್ತ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಎಲ್ಲಾ ಸ್ವಯಂ ಸೇವಾ ಸಂಘಟನೆಗಳು ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು.
ಸಭೆಯಲ್ಲಿ ಡಿಹೆಚ್ಓ ಡಾ. ರೋಹಿಣಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಸತೀಶ್ಚಂದ್ರ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love