Home Mangalorean News Kannada News ಜುಲೈ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ 99 ಮಂದಿಗೆ ಕೊರೋನಾ ಪಾಸಿಟಿವ್

ಜುಲೈ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ 99 ಮಂದಿಗೆ ಕೊರೋನಾ ಪಾಸಿಟಿವ್

Spread the love

ಜುಲೈ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ 99 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 99 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 1650 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 661 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಸೋಮವಾರ 54 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸ ಲಾಗಿದೆ. 213 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದ 24 ಜನರನ್ನು ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love

Exit mobile version