ಜುಲೈ 23 ರಿಂದ ಉಡುಪಿ ಜಿಲ್ಲೆಯಲ್ಲಿ ನರ್ಮ್, ಖಾಸಗಿ ಬಸ್ ಗಳ ಸಂಚಾರ ಆರಂಭ – ಶಾಸಕ ರಘುಪತಿ ಭಟ್
ಉಡುಪಿ: ಕೋರೋಣ ನಿಯಂತ್ರಣ ದೃಷ್ಟಿಯಿಂದ ರಾಜ್ಯದಲ್ಲಿ ಕೆಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿರುವುದರಿಂದ ಉಡುಪಿ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ದಿನಂಪ್ರತಿ ಕೆಲಸಕಾರ್ಯಗಳಿಗೆ ತೆರಳುತ್ತಿರುವ ಜನಸಾಮಾನ್ಯರಿಗೆ ಸಂಕಷ್ಟ ವಾಗಿರುವುದರಿಂದ ತಕ್ಷಣದಲ್ಲಿ ಬಸ್ ಸಂಚಾರ ಆರಂಭಿಸುವಂತೆ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ಜುಲೈ 22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಸ್ ಸಂಚಾರ ನಿಲ್ಲಿಸಿರುವುದರಿಂದ ಆಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದ ಶಾಸಕ ಕೆ. ರಘುಪತಿ ಭಟ್ ಜುಲೈ 23 ರಿಂದ ಉಡುಪಿ ಜಿಲ್ಲೆಯಲ್ಲಿ ನರ್ಮ್ ಬಸ್ ಹಾಗೂ ಖಾಸಗಿ ಬಸ್ ಗಳ ಸಂಚಾರ ಆರಂಭಿಸುವಂತೆ ಸೂಚಿಸಿದರು. ಇದಕ್ಕೆ ಸಮ್ಮತಿ ದೊರಕಿದ್ದು, ನಾಳೆಯಿಂದ ಉಡುಪಿಯಲ್ಲಿ ನರ್ಮ್ ಬಸ್ಸು ಹಾಗೂ ಖಾಸಗಿ ಬಸ್ಸು ಸಂಚಾರ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿಯ ಕೆ. ಎಸ್.ಆರ್.ಟಿ.ಸಿ ಡಿಪೋ ಮ್ಯಾನೇಜರ್, ಆರ್.ಟಿ.ಓ ಅಧಿಕಾರಿಗಳು ಮತ್ತು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.