Home Mangalorean News Kannada News ಜು 22ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ – ಲಕ್ಷ್ಮೀ ಹೆಬ್ಬಾಳ್ಕರ್

ಜು 22ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ಜು 22ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ

ಬೆಂಗಳೂರು: ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದಿದ್ದಾರೆ.

ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.

ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತಂತೆ. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಆದರೆ ಈಗ ಅಂಗನವಾಡಿಗೆ ಸೇರುವ ಮಕ್ಕಳನ್ನ ಆಯಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗೆ ಸೇರಿದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ.

ಕಾರ್ಯಕರ್ತೆಯರು, ಸಹಾಯಕರಿಯರು, ಅಡುಗೆ ಸಹಾಯಕಿರು ಕೆಲಸ ಕಳೆದುಕೊಳ್ಳುವ ಸ್ಥಿತಿ ಬರತ್ತೆ. ಇದು ಮುಂದೊಂದು ದಿನ ಮಕ್ಕಳಿಲ್ಲದೇ ಅಂಗನವಾಡಿ ಕೇಂದ್ರಗಳು ಬಂದ್ ಆಗಿ ರಾಜ್ಯದಲ್ಲಿರುವ 1.30 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರು ಕೆಲಸವಿಲ್ಲದೇ ಬೀದಿಗೆ ಬೀಳ್ಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದರು.


Spread the love

Exit mobile version