ಜು. 30 ರ ತನಕ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಕಾಜ್ಞೆ ಹೊರಡಿಸಿ ಕಮೀಷನರ್ ಆದೇಶ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡುವಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ 16 ಬೆಳಿಗ್ಗೆ 6.00 ಗಂಟೆಯಿಂದ ಜುಲೈ 30ರ ರಾತ್ರಿ 12.00 ಗಂಟೆಯವರೆಗೆ ಈ ಕೆಳಕಂಡ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ರಂತೆ ನಿರ್ಬಂಧಕಾಜ್ಞೆ ಹೊರಡಿಸಿ ಪೋಲಿಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಮಂಗಳೂರು ಕಮೀಷನರೇಟ್ ವ್ಯಾಪ್ತಿಗೆ ಮಾತ್ರ ಸೀಮಿತವಾಗಿದ್ದು, ಇದರ ಪ್ರಕಾರ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಬಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು; ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು; ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು; ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು; ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾದೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸ (ಕಡೆಗಣಿಸ) ಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದಶರ್ಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದಿಸಲಾಗಿದೆ.