Home Mangalorean News Kannada News ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

Spread the love

ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

ಉಡುಪಿ: ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳ ಪರವಾಗಿ ಅಪರಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮನವಿ ಸಲ್ಲಿಸಿದರು.

ಇಡೀ ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಾಂಡವವಾಡುತ್ತಿರುವ ಈ ಹೊತ್ತು ಕೇಂದ್ರ ಸರಕಾರವು ಜೆ ಇ ಇ ಮತ್ತು ನೀಟ್ ಪರೀಕ್ಷೆಗಳನ್ನು ಜರುಗಿಸಲು ಮುಂದಾಗಿರುವುದು ಒಂದು ಮೂರ್ಖತನದ ನಿರ್ಧಾರವಾಗಿರುತ್ತದೆ. ಸಾಂಕ್ರಾಮಿಕ ರೋಗ ಹರಡುವ ಈ ಹೊತ್ತು ವಿದ್ಯಾರ್ಥಿಗಳು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವುದು ಕೂಡ ವಾಹನಗಳ ಅಲಭ್ಯತೆಯಿಂದ ಕಷ್ಟಸಾಧ್ಯ ಅಲ್ಲದೆ ವಸತಿ ಸೌಕರ್ಯ ಲಭ್ಯವಾಗುವುದು ಕಷ್ಟ ಸಾದ್ಯ ಇದರಿಂದಾಗಿ ವಿದ್ಯಾರ್ಥಿಗಳೂ ಹಾಗೂ ಹೆತ್ತವರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ.

ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳ ವರ್ಚುವಲ್ ಮೀಟಿಂಗ್ ನಲ್ಲಿ ಈ ವಿಷಯವನ್ನು ಎತ್ತಿದಾಗ ಎಲ್ಲಾ ಮುಖ್ಯಮಂತ್ರಿಗಳೂ ಇದಕ್ಕೆ ವಿರೋಧ ಸೂಚಿಸಿದ್ದಾರೆ ಮತ್ತು ಕೇಂದ್ರ ಸರಕಾರ ಈ ಪರೀಕ್ಷೆಗಳನ್ನು ಮಾಡುವ ನಡೆಯನ್ನು ವಿರೋಧಿಸಿದ್ದಾರೆ ಮತ್ತು ಅವರು ಇದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಕೂಡ ಕೇಂದ್ರ ಸರಕಾರದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಗಮನಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇಂದ್ರ ಸರಕಾರ ಜರುಗಿಸಲು ನಿರ್ಧರಿಸುವ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ

ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾರ್ಯದರ್ಶಿ ಹರೀಶ್ ಕಿಣಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಎನ್.ಎಸ್.ಯು.ಐ. ಕ್ರಿಸ್ಟನ್ ಡಿ ಆಲ್ಮೇಡಾ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಜನಾರ್ಧನ ಭಂಡಾರ್ಕರ್, ವೆರೋನಿಕಾ ಕರ್ನೆಲಿಯೊ ಹಾಗೂ ಇತರು ಉಪಸ್ಥಿತರಿದ್ದರು.


Spread the love

Exit mobile version