ಜ. 25 ರಿಂದ 27ರ ವರೆಗೆ ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ

Spread the love

ಜ. 25 ರಿಂದ 27ರ ವರೆಗೆ ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣ, ಶಿವಳ್ಳಿಯಲ್ಲಿ ಜನವರಿ 25 ರಿಂದ 27 ರ ವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

ಅವರು ಗುರುವಾರ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಫಲಪುಷ್ಪ ಪ್ರದರ್ಶನದ ಉದ್ಘಾಟನೆಯನ್ನು ಜ. 25 ರಂದು ಬೆಳಿಗೆ, 9:30 ಗಂಟೆಗೆ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳೂರ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ಸರ್ಕಾರರವರು ನೆರವೇರಿಸಲಿದ್ದಾರೆ, .ಯಶಪಾಲ್ ವಿ. ಸುವರ್ಣ ಶಾಸಕರು, ಉಡುಪಿರವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲೆಯ ಸಂಸದರು/ಶಾಸಕರುಗಳು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

 ಫಲಪುಷ್ಪ ಪ್ರದರ್ಶನದ ಅಂಗವಾಗಿ ಸುಮಾರು 7000 ಸಂಖ್ಯೆಯ 23 ಜಾತಿಯ ಹೂವಿನ ಗಿಡಗಳಾದ ಪೆಟನಿಯ, ಸೆಲೋಷಿಯಾ, ಸಾಲಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಆಸ್ಟರ್, ಬಾಲ್ಯ,ಮ್, ತೊರೇನಿಯ, ಯುಜೀನಿಯಾ, ಗುಲಾಬಿ, ಟೆಕೋಮಾ, ವಾಸವಾಳ, ಪ್ಯಾನಿ, ಇಂಪೇಷಿಯನ್ಸ್ ಮುಂತಾದ ಗಿಡಗಳನ್ನು ಜೋಡಿಸಲಾಗುವುದು.

ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು:

  1. ಫಲಪ್ತಷ್ಪ ಪ್ರದರ್ಶನದಲ್ಲಿ ಸುಮಾರು 1,25,000 ಸಂಖ್ಯೆಯ ಗುಲಾಬಿ, ಸೇವಂತಿಗೆ, ಆರ್ಕಿಡ್ಸ್, ಲಿಲಿಯಮ್ ಹಾಗೂ ಮುಂತಾದ ಹೂವುಗಳನ್ನು ಬಳಸಿ ವಿವಿಧ ಕಲಾಕೃತಿಗಳನ್ನು ತಯಾರಿಸಲಾಗುವುದು.
  2. ವಿವಿಧ ಪುಷ್ಪಗಳನ್ನು ಉಪಯೋಗಿಸಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಾದ ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿಗಳ ಕಲಾಕೃತಿಗಳನ್ನು ಒಳಗೊಂಡ ಪ್ರದರ್ಶಿಕೆಗಳ ಪ್ರದರ್ಶನ
  3. ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಹೂವಿನಲಿ ಅರಳಿದ ಕರ್ನಾಟಕದ ಪ್ರತಿಕೃತಿ
  4. ಹೂವುಗಳಿಂದ ತಯಾರಿಸಿದ Selfy Zone ಮಾದರಿ
  5. ವಿವಿಧ ಅಲಂಕಾರಿಕ ಗಿಡಗಳ ಪ್ರದರ್ಶನ, ಹೂವಿನ ಕುಂಡಗಳ ಜೋಡಣೆ ಏರ್ಪಡಿಸಲಾಗುವುದು
  6. . ವಿವಿಧ ತರಕಾರಿಗಳ ಮಾದರಿ ಕೈತೋಟ
  7. ಫಲಪುಷ್ಪ ಪ್ರದರ್ಶನದಲ್ಲಿ ದಿ: 25-01-2025 ರಂದು ಕೈತೋಟಿ ಮತ್ತು ತಾರಸಿ ತೋಟ ನಿರ್ಮಾಣ ಹಾಗೂ ನಿರ್ವಹಣೆ ಕುರಿತು ಹಾಗೂ ದಿ: 26-01-2025 ರಂದು ಕರಾವಳಿಗೆ ಸೂಕ್ತವಾದ ಹೊಸ ತೋಟಗಾರಿಕೆ ಬೆಳೆಗಳ ಕುರಿತು ವಿಚಾರ ಸಂಕೀರ್ಣವನ್ನು ಏರ್ಪಡಿಸಿದೆ
  8. ಕೃಷಿ ಸಂಬಂದಿತ ಇಲಾಖೆಗಳಾದ ಕೃಷಿ, ಮೀನುಗಾರಿಕೆ, ಜಿಲ್ಲಾ ಪಂಚಾಯತ್‌ನ DAY-NRLM ಸಂಘ, ಪಶುಸಂಗೋಪನೆ, ಕೃಷಿ ವಿಜ್ಞಾನ ಕೇಂದ್ರ, ಬ್ಯಾಂಕ್ ಹಾಗೂ ಇತರೆ ಇಲಾಖೆಗಳಿಂದ ವಸ್ತು ಪ್ರದರ್ಶನ, ಇಲಾಖಾ ಯೋಜನೆಗಳ ಮಾಹಿತಿ ಮಳಿಗೆಗಳನ್ನು ತೆರೆಯಲಾಗುವುದು.
  9. ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಯನ್ನು ತೆರೆಯಲಾಗುವುದು.
  10. ರೈತರು ಬೆಳೆದಿರುವಂತಹ ವಿಶಿಷ್ಟವಾದ ಹಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರು ಬೆಳೆಗಳ ಪ್ರದರ್ಶಿಕೆಯನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಆಸಕ್ತರು ಜನವರಿ 24 ರಂದು ಸಂಜೆ 3:00 ಗಂಟೆಗೆ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಅವರಣ, ಶಿವಳಿ ಮಾದರಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ ಇಲ್ಲಿ ಪುದರ್ಶಿಕೆಗಳನ್ನು ತಂದು ಹೆಸರನ್ನು ನೊಂದಾಯಿಸಿಕೊಳ್ಳುವುದು

ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಉಡುಪಿ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು, ಶಾಲೆ ಕಾಲೇಜು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು


Spread the love
Subscribe
Notify of

0 Comments
Inline Feedbacks
View all comments