ಜ.25-26: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Spread the love

ಜ.25-26: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25 ಮತ್ತು 26ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜ.25ರಂದು ರಾತ್ರಿ 9:50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಜ.26ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆ, 10ಕ್ಕೆ ನೆಹರೂ ಮೈದಾನದಲ್ಲಿ ವಿಂಟೇಜ್ ಕ್ಲಾಸಿಕ್ ಕಾರ್ ಮತ್ತು ಬೈಕ್ ಕಾರ್ನಿವಲ್ 2025 ಕಾರ್ಯಕ್ರಮಕ್ಕೆ ಚಾಲನೆ, 10:30ಕ್ಕೆ ಮಂಗಳೂರು ಲೈಟ್ ಹೌಸ್‌ಹಿಲ್‌ನಲ್ಲಿ ಮಹಾತ್ಮ ಗಾಂಧಿ ಶಾಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಪೂ.11:45ಕ್ಕೆ ಗುರುಪುರ ನಾಡಕಚೇರಿ ಉದ್ಘಾಟನೆ, ಸಂಜೆ 4ಕ್ಕೆ ಮಂಗಳೂರು ಪುರಭವನ ಮುಂಭಾಗದ ರಾಜಾಜಿ ಪಾರ್ಕ್‌ನಲ್ಲಿ ನಡೆಯುವ ಎಸ್ಕೆಎಸೆಸ್ಸೆಫ್ ಮಾನವ ಸರಪಳಿ ಕಾರ್ಯಕ್ರಮ, ಸಂಜೆ 4:30ಕ್ಕೆ ಅಂಬ್ಲಮೊಗರು ಸ.ಹಿ.ಪ್ರಾ ಶಾಲಾ ಶತಮಾನೋತ್ಸವ ಸಂಭ್ರಮ, ಶಾಲಾ ಶತಮಾನೋತ್ಸವ ಸ್ಮಾರಕ ಭವನ ಶಿಲಾನ್ಯಾಸ ಕಾರ್ಯಕ್ರಮ, 5:15ಕ್ಕೆ ಪೆರ್ಮನ್ನೂರು ಬಬ್ಬುಕಟ್ಟೆ, ದ.ಕ.ಜಿಪಂ ಹಿ. ಪ್ರಾ.ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಪಾಲ್ಗೊಳ್ಳುವರು.

ಸಂಜೆ 6:40ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.


Spread the love