ಜ. 7-8: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆ ಸುವರ್ಣ, ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ
ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಮತ್ತು ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವು ಜನವರಿ 7 ಮತ್ತು 8 ರಂದು ಜರುಗಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಬೆಳ್ಕಳೆ ಅವರು ತಿಳಿದ್ದಾರೆ.
ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜನವರಿ 7ರಂದು ಬೆಳಿಗ್ಗೆ 9 ಕ್ಕೆ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ ಅವರು ಧ್ವಜಾರೋಹಣವನ್ನು ನೇರವರಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ಸಚಿವ ತನ್ವೇರ್ ಸೇಠ್ ಅವರು ಪ್ರೌಢಶಾಲಾ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸವಾಮೀಜಿ, ತೊಟ್ಟಂ ಸಂತ ಅನ್ನಾ ಚರ್ಚ್ ಧರ್ಮಗುರು ವಂ ಫ್ರಾನ್ಸಿಸ್ ಕರ್ನೆಲಿಯೋ, ಮಲ್ಪೆ ಸೈದಿನಾ ಅಬೂಬಕಕರ್ ಸಿದ್ದಿಕ್ ಜಾಮೀಯಾ ಮಸೀದಿ ಇದರ ಧರ್ಮಗುರು ಮೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ಅವರು ಆಶೀರ್ವಚನ ನೀಡಲಿದ್ದಾರೆ.
ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ವಿಧಾನಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಇತರ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ಮಲ್ಪೆ ಮತ್ಸ್ಯೋಧ್ಯಮಿ ಸಾಧು ಸಾಲ್ಯಾನ್ ಉದ್ಘಾಟಿಸಲಿದ್ದು, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಬೆಳ್ಕಳೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಅಬುದಾಬಿಯ ಉದ್ಯಮಿ ಡಾ ಬಿ ಆರ್ ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ತಾಪಂ ಸದಸ್ಯರುಗಳಾದ ಧನಂಜಯ ಕುಮಾರ್, ಶರತ್ ಕುಮಾರ್, ಪ್ರಮುಖರಾದ ಪ್ರಸಾದ್ ರಾಜ್ ಕಾಂಚನ್, ಜಯಕರ ಶೆಟ್ಟಿ ಇಂದ್ರಾಳಿ, ಉದಯಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಹಾಗೂ ಇತತರು ಉಪಸ್ಥಿತರಿರುವರು. ರಾರಿ 7 ಗಂಟೆಗೆ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಂದ ನೃತ್ಯವೈವಿಧ್ಯ ಕಾರ್ಯಕ್ರಮ ಜರುಗಲಿದೆ.
ಜನವರಿ 8 ರಂದು ಬೆಳಿಗ್ಗೆ 10 ಗಂಟೆಗೆ ಹಳೆ ವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ಹಾಗೂ ಸಂಜೆ 4 ಗಂಟೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ರುಕ್ಮಿಣಿ ಸವ್ಯಂವರ ಯಕ್ಷಗಾನ ನಡೆಯಲಿದೆ. ಸಂಜೆ 5.30ಕ್ಕೆ ಜರುಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಹಿಸಲಿದ್ದು, ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ ನಿಬಿ ವಿಜಯ ಬಲ್ಲಾಳ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿಗಳಾದ ಅಮೃತ್ ಶೆಣೈ, ಶೇಖರ್ ಜಿ ಕೋಟ್ಯಾನ್, ಇಮ್ತಿಯಾಜ್ ಗುಡ್ಮೆ, ಅನಂದ ಪಿ ಸುವರ್ಣ ಹಾಗೂ ಇತರರು ಉಪಸ್ಥಿತರಿರುವರು. ಸಂಜೆ 7 ಗಂಟೆಗೆ ಹಳೆ ವಿದ್ಯಾರ್ಥಿಗಳಿಂದ ವಿವಧ ವಿನೋದಾವಳಿ ಹಾಗೂ 8 ಗಂಟೆಗೆ ಪಿರಬನ್ನಗ ತುಳು ಹಾಸ್ಯಮಯ ಸಾಮಾಜಿಕ ನಾಟಕ ನಡೆಯಲಿದೆ.
ಸುದ್ದಿಗೋಷ್ಟಿಯಲ್ಲಿ ಸಮಿತಿಯಗೋಪಾಲಕೃಷ್ಣ ಶೆಟ್ಟಿ, ಸತೀಶ್ ನಾಯ್ಕ್, ಭವಾನಿ ಶಂಕರ್ ಲಾಡ್, ಸುರೇಶ್ ಕುಮಾರ್, ಮೋಹನ್ ಕಾಲೇಜಿನ ಪ್ರಾಂಶುಪಾಳ ಡಾ|ಸಿದ್ದೇಶ್ವರಪ್ಪ ಉಪಸ್ತಿತರಿದ್ದರು.