ಟೋಲ್ ಸಮಸ್ಯೆ ; ಕೋಟ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ಉಡುಪಿ: ಸ್ಥಳೀಯರಿಗೆ ಟೋಲ್ ರಿಯಾಯತಿ ನೀಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಆಯೋಜಿಸಿದ ಕೋಟ ಬಂದ್ ಶುಕ್ರವಾರ ಬೆಳಗಿನಿಂದ ಆರಂಭವಾಗಿದ್ದು ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೋಟದಿಂದ ಮಾಬುಕಳದ ವರೆಗಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲವನ್ನು ವ್ಯಕ್ತಪಡಿಸಿವೆ.
ಟೋಲ್ ಪ್ರದೇಶದಲ್ಲಿ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಎಲ್ಲಾ ರೀತಿಯ ಮುಂಜಾಗ್ರತೆಯನ್ನು ವಹಿಸಿಕೊಳ್ಳಲಾಗಿದೆ.
ಪ್ರತಿಭಟನೆಗೆ ಕೋಟದಿಂದ ಮಾಬುಕಳದ ವರೆಗಿನ 130ಕ್ಕೂ ಅಧಿಕ ಅಧಿಕ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ.
ಟೋಲ್ ಪ್ಲಾಜಾದ ಬಳಿ ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು, ಪ್ರತಿಭಟನಾಕಾರರು ಜಮಾಯಿಸಿಲು ಆರಂಭವಾಗಿದ್ದು, ಪ್ರತಿಭಟನಾ ಸಭೆಯಲ್ಲಿ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.