ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಸೂಚನೆ

Spread the love

ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು:  ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ ಸಿದ್ಧತೆಗೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತನಾಡಿ, ಡಾ. ಬಾಬು ಜಗಜೀವನ್ ರಾಂ ಅವರ ಜನ್ಮದಿನಾಚರಣೆಯನ್ನು ಏಪ್ರಿಲ್ 5 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು. ಅಂದು ಸಭಾ ಕಾರ್ಯಕ್ರಮದ ನಂತರ ಅವರ ಜೀವನ ಚರಿತ್ರೆಯ ಕುರಿತ ಚಲನಚಿತ್ರ ಪ್ರದರ್ಶನ ನಡೆಸಲಾಗುವುದು ಎಂದರು.

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಏಪ್ರಿಲ್ 14 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂದೆ ಇರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ಆಚರಿಸಲಾಗುವುದು. ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುವ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿರುವ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ಹೆಸರನ್ನು ಪುರಭವನದಲ್ಲಿ ಪ್ರದರ್ಶಿಸಲಾಗುವುದು ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶಿಕ್ಷಣ ಇಲಾಖೆ ಬಿ.ಇ.ಓ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಡಾ. ಬಿ.ಎಸ್. ಹೇಮಲತಾ ಮಾತನಾಡಿ, ಶಿಷ್ಟಾಚಾರದ ಅನ್ವಯ ಎಲ್ಲಾ ಇಲಾಖೆ, ಜನಪ್ರತಿನಿಧಿಗಳು ಹಾಗೂ ಮುಖಂಡರಿಗೆ ನೀಡಲಾಗುವುದು. ಜಯಂತಿಯಲ್ಲಿ ಭಾಗವಹಿಸುವವರಿಗೆ ಅಗತ್ಯ ವ್ಯವಸ್ಥೆ ಮಾಡಲು ಸಂಬಂಧಿಸಿದವರಿಗೆ ಸೂಚಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ಸಮುದಾಯದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments