ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ – ಮಿಥುನ್ ರೈ
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆಯ ಬಗ್ಗೆ ಮಾತನಾಡುವ ಗೋರಕ್ಷಕರು ಮೊದಲು ಅವರ ಮನೆಗಳಲ್ಲಿ ಗೋವುಗಳನ್ನು ಸಾಕಿ ಬಳಿಕ ಮಾತನಾಡಲಿ ಎಂದು ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದರು.
ಅವರು ಬುಧವಾರ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು.
ನಾವು ಕೇವಲ ಬಾಯಲ್ಲಿ ಗೋರಕ್ಷಣೆ ವಿಚಾರ ಮಾತನಾಡಲ್ಲ ಬದಲಾಗಿ ಸ್ವತಃ ಗೋವುಗಳನ್ನು ಸಾಕಿ ಪೋಷಿಸುತ್ತೇವೆ. ನನ್ನ ಮನೆಯಲ್ಲಿಯೇ ಹಲವಾರು ಗೋವುಗಳನ್ನು ಸಾಕಿದ್ದೇನೆ ಅಲ್ಲದೆ ದಾನ ಕೂಡ ಮಾಡಿದ್ದೇನೆ ಎಂದರು.
ಇಂದು ಕೊರೋನ ಎಂಬುದು ಹಣ ಮಾಡುವ ದಂಧೆಯಾಗಿ ಪರಿಣಮಿಸಿದೆ. ಈ ಮೂಲಕ ಇಡೀ ರಾಜ್ಯ ಅವ್ಯವಹಾರದ ಕೂಪವಾಗಿ ಬಿಟ್ಟಿದೆ. ಕೊರೋನ ಚಿಕಿತ್ಸಾ ಸಲಕರಣೆಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸುವ ಮೂಲಕ ಭ್ರಷ್ಟಾ ಚಾರ ಎಸಗಲಾಗಿದೆ ಎಂದು ಆರೋಪಿಸಿದರು.
ಸರ್ಕಾರವು ಕಾರ್ಮಿಕರಿಗೆ ಊರಿಗೆ ತೆರಳಲು ವ್ಯವಸ್ಥೆ ಮಾಡದೇ ಅನ್ಯಾಯ ಎಸಗಿದ ಕಾಂಗ್ರೆಸ್ ವೋಟ್ ಕೇಳಲು ಪಕ್ಷ ಮಾತ್ರವಲ್ಲ, ಜನರ ಹಿತರಕ್ಷಣೆ ಮಾಡಿದ ಪಕ್ಷ ಕೂಡಾ ಆಗಿದೆ. ಸೋಲು ಜೀವನದ ಅಂತ್ಯವಲ್ಲ, ಅದು ಯಶಸ್ಸಿನ ಆರಂಭ. ಮುಂಬರುವ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಕ್ತವಾಗಲಿದೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಅವಿಭಜಿತ ದ.ಕ. ಜಿಲ್ಲೆಯನ್ನು ಬಿಜೆಪಿ ಮುಕ್ತ ಮಾಡಲಾ ಗುವುದು ಎಂದರು.
ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿಲ್ಲದೆ ನಡೆಯುತ್ತಿದೆ. ಉಡುಪಿ ಶಾಸಕ ರಘುಪತಿ ಭಟ್ ಆಪ್ತರು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಇನ್ನೊಂದು ಕಡೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸಿಮೆಂಟ್ ದಂಧೆ ತೂಡಗಿದ್ಯಾರ. ನಿಮಗೆ ಸಿಮೆಂಟ್ ಬೇಕಿದ್ದರೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತಂದುಕೊಡುತ್ತದೆ. ಸರ್ಕಾರದ ಖಜಾನೆ ಲೂಟಿ ಮಾಡುವ ಕೆಲಸ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ ಕೇಂದ್ರ ಸರ್ಕಾರ ಕೊಟ್ಟ ಆಶ್ವಾಸನೆಗಳನ್ನು ಯಾವುದನ್ನು ಈಡೇರಿಸಿಲ್ಲ. ಇಡಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳ ಮೇಲೆ ದಾಳಿ ಮಾಡುವ ಕೆಲಸ ಮಾಡುತ್ತಿದೆ. ಕೊಲೊನಾ ಸಂಕಷ್ಟದ ಮಧ್ಯೆ ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ರಾಜ್ಯ ಸರ್ಕಾರ ಜನರ ರಕ್ಷಣೆ ಮಾಡುವ ಬದಲು ಕೊರೊನಾ ಭ್ರಷ್ಟಾಚಾರದಲ್ಲಿ ತೊಡಗಿದೆ ತೈಲ ಬೆಲೆ ಇಂದು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಜನರ ಬದುಕು ದುಸ್ತರ ಆಗುತ್ತಿದೆ. ಇಡೀ ದೇಶವನ್ನು ಮೋದಿ ಬಂಡವಾಳಶಾಹಿಗಳ ಕೈಗೆ ಒಪ್ಪಿಸುತ್ತಿದ್ದಾರೆ ಎಂದು ದೂರಿದರು.
ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್, ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಸುಹೆಲ್ ಕಂದಕ್, ಅಬ್ದುಲ್ ಅಝೀಝ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರಮೇಶ್ ಹೆಗ್ಡೆ, ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಯೋಗೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಸ್ವಾಗತಿಸಿದರು.