Home Mangalorean News Kannada News ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣ – ಯಶ್ಪಾಲ್ ಸುವರ್ಣ

ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣ – ಯಶ್ಪಾಲ್ ಸುವರ್ಣ

Spread the love

 ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣ – ಯಶ್ಪಾಲ್ ಸುವರ್ಣ

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರ ಸೂಚನೆಯಂತೆ ಉಡುಪಿ  ಶಾಸಕ ಯಶ್ ಪಾಲ್ ಸುವರ್ಣ ಭೇಟಿ  ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ  ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

 ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ 60% ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ 80% ಪೂರ್ಣಗೊಂಡ ಬಳಿಕ  ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ  ಸ್ಟೀಲ್ ಬ್ರಿಡ್ಜ್  ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು,  ಜನವರಿಯಲ್ಲಿ  ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ  ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version