Home Mangalorean News Kannada News ಡಿಸೆಂಬರ್ 21 ಮೂಡಬಿದ್ರೆ ಕಂಬಳ : ಮುಖ್ಯಮಂತ್ರಿ ಆಗಮನ 

ಡಿಸೆಂಬರ್ 21 ಮೂಡಬಿದ್ರೆ ಕಂಬಳ : ಮುಖ್ಯಮಂತ್ರಿ ಆಗಮನ 

Spread the love

ಡಿಸೆಂಬರ್ 21 ಮೂಡಬಿದ್ರೆ ಕಂಬಳ : ಮುಖ್ಯಮಂತ್ರಿ ಆಗಮನ  

ಮಂಗಳೂರು : ಮೂಡಬಿದ್ರೆಯಲ್ಲಿ ಡಿಸೆಂಬರ್ 21ರಂದು ನಡೆಯಲಿರುವ ಕೋಟಿ ಚೆನ್ನಯ್ಯ ಕಂಬಳಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಲಿದ್ದಾರೆ.

ಗುರುವಾರ ಮೂಡಬಿದಿರೆಯ ಕಂಬಳ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಈ ವಿಷಯ ತಿಳಿಸಿದರು. ಮೂಡಬಿದ್ರೆ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ನಡೆಯಲಿದೆ. ಇದೇ ಸಂದರ್ಭದಲ್ಲಿ ಕಂಬಳ ಆವರಣದಲ್ಲಿ ನಿರ್ಮಾಣಗೊಂಡಿರುವ ವೀರರಾಣಿ ಅಬ್ಬಕ್ಕ ಪ್ರತಿಮೆಯನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಈ ಕಂಬಳ ಕ್ರೀಡಾಕೂಟಕ್ಕೆ ಯುವಜನಸೇವೆ ಮತ್ತು ಕ್ರೀಡಾ ಇಲಾಖೆಯಿಂದ 5 ಲಕ್ಷ ರೂ. ಬಿಡುಗಡೆ ಆಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಚಿವರಾದ ಆರ್. ಅಶೋಕ್, ಸಿ.ಟಿ. ರವಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಮೂಡಬಿದ್ರೆ ಕಡಲಕೆರೆಯನ್ನು ಪಿಲಿಕುಲ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ರೂ. ಮೊತ್ತದ ಯೋಜನೆ ಜಾರಿಗೆ ತರಲು ಈಗಾಗಲೇ ರೂಪುರೇಷೆ ಸಿದ್ಧಗೊಳಿಸಲಾಗಿದೆ. ಇದರಲ್ಲಿ ಕಡಲಕೆರೆ ಅಭಿವೃದ್ಧಿಗೆ ರೂ. 3 ಕೋಟಿ ಹಾಗೂ ಅಬ್ಬಕ್ಕ ಸಂಸ್ಕøತಿ ಗ್ರಾಮ ನಿರ್ಮಾಣಕ್ಕೆ ರೂ. 2 ಕೋಟಿ ವೆಚ್ಚ ಮಾಡಲಾಗುವುದು ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಮೂಡಬಿದ್ರೆ ಹಾಗೂ ಮೂಲ್ಕಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಗುವುದು ಎಂದು ಅವರು ಹೇಳಿದರು.


Spread the love

Exit mobile version