ಡಿ. 15: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ವಿಚಾರಗೋಷ್ಠಿ

Spread the love

ಡಿ. 15: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮತ್ತು ವಿಚಾರಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2016ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಬರಹಗಾರ, ಉಪನ್ಯಾಸಕ ಕಲೀಮುಲ್ಲಾಹ್ ರವರ ‘ಕ್ಲಾಸ್ ಟೀಚರ್’ ಕೃತಿ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಡಿ.15ರಂದು ಸಂಜೆ ಗಂಟೆ 4.30ಕ್ಕೆ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ‘ಬಹುತ್ವ ಭಾರತದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಸಾಣೇಹಳ್ಳಿ ಶ್ರೀ ತರಳಬಾಳು ಜಗದ್ಗುರು ಮಠದ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮುಖ್ಯ ಭಾಷಣ ಮಾಡಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಅಶೋಕ, ಪತ್ರಕರ್ತ ವಿಖಾರ್ ಅಹ್ಮದ್ ಸಈದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love