ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ

Spread the love

ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ

ಮಂಗಳೂರು: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್.ಐ.ಓ) ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಬೀದ್ ಶಾಫಿ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಿಹಾಲ್ ಕಿದಿಯೂರು ಡಿ.22, 2018 ರಂದು ಶನಿವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಸಂಜೆ 6.30 ಕ್ಕೆ ಮಂಗಳೂರಿನ ಕಂಕನಾಡಿಯಲ್ಲಿರುವ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿರುವ ಸ್ವಾಗತ ಮತ್ತು ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಲಿದ್ದಾರೆ.

ಜಮಾಅತೆ ಇಸ್ಲಾಮೀ ಹಿಂದ್ ದ.ಕ. ಜಿಲ್ಲಾಧ್ಯಕ್ಷ ಅಮೀನ್ ಅಹ್ಸನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಸಂಚಾಲಕರಾದ ಅಬ್ದುಸ್ಸಲಾಂ ಉಪ್ಪಿನಂಗಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿ.ಐ.ಓ ಕರ್ನಾಟಕ ರಾಜ್ಯಾಧ್ಯಕ್ಷೆಯಾಗಿ ಆಯ್ಕೆಯಾದ ಉಮೈರಾ ಬಾನು, ಎಸ್.ಐ.ಓ.ನ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಅಶ್ಫಾಕ್ ಅಹ್ಮದ್ ಶರೀಫ್, ಎಸ್.ಐ.ಓ. ದ.ಕ. ಜಿಲ್ಲಾಧ್ಯಕ್ಷ ಅಹ್ಮದ್ ಮುಬೀನ್, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ದ.ಕ. ಜಿಲ್ಲಾ ಸಂಚಾಲಕಿ ಝೀನತ್ ಹಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎಸ್.ಐ.ಓ. ದ.ಕ. ಜಿಲ್ಲಾ ಕಾರ್ಯದರ್ಶಿ ನಿಝಾಮ್ ಉಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


Spread the love