Home Mangalorean News Kannada News ಡಿ.6- ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಡಿ.6- ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

Spread the love

ಡಿ.6- ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು :  ಡಿಸೆಂಬರ್ 6 ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯು ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಅಂದು ನಡೆಸಲು ಉದ್ದೇಶಿಸಿರುವ ಕಾರ್ಯಕ್ರಮಗಳಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಸಂಪೂರ್ಣ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 35ರನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಡಾ: ಹμರ್Á ಪಿ.ಎಸ್ ಇವರು ಡಿಸೆಂಬರ್ 6 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧನಾ ಆಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.

ನಿಬರ್ಂಧಕಾಜ್ಞೆ ಜ್ಯಾರಿಯಲ್ಲಿರುವ ಸಮಯದಲ್ಲಿ :- ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದು, ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣೆಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೋ ಸಾರ್ವಜನಿಕ / ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು, ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾದೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸ (ಕಡೆಗಣಿಸ) ಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿμÉೀಧಿಸಿದೆ.

ಈ ನಿಬರ್ಂಧಕಾಜ್ಞೆಯು ಮಂಗಳೂರು ನಗರ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮಾತ್ರ ಜ್ಯಾರಿಯಲ್ಲಿರುತ್ತದೆ. ಈ ನಿಬರ್ಂಧಕಾಜ್ಞೆಯು ಜ್ಯಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ.


Spread the love

Exit mobile version