ಡ್ರಗ್ಸ್ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

Spread the love

ಡ್ರಗ್ಸ್ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿತಪ್ಪುತ್ತಿದ್ದಾರೆ.

ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ , ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.


Spread the love