ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ – ಡಿಜಿಪಿ ಪ್ರವೀಣ್ ಸೂದ್

Spread the love

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ – ಡಿಜಿಪಿ ಪ್ರವೀಣ್ ಸೂದ್

ಉಡುಪಿ: ಡ್ರಗ್ಸ್ ಸಂಬಂಧಿತ ಪೊಲೀಸ್ ಇಲಾಖೆಯ ಕಾರ್ಯಾಚರಣೆ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ ಬೆಳಗಾಂ ಹುಬ್ಬಳ್ಳಿ ಚಿತ್ರದುರ್ಗ ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ. ಈಗ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ ಡ್ರಗ್ಸ್ ಬಗ್ಗೆ ನಮ್ಮದು ಜೀರೋ ಟಾಲರೆನ್ಸ್ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಅವರು ಉಡುಪಿಯ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದರು

ಡ್ರಗ್ಸ್ ನಿಯಂತ್ರಣದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ಡ್ರಗ್ಸ್ ನಲ್ಲಿ ವಿವಿಧ ರೀತಿಯಲ್ಲಿದ್ದು ಸಾಫ್ಟ್ ಡ್ರಗ್ಸ್ ,ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾ ಡಲು ಪೊಲೀಸ್ ಇಲಾಖೆ ಸನ್ನದ್ದವಾಗಿದೆ. ಚಾಕಲೇಟ್ ಡ್ರಿಂಕ್ಸ್ ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡಲಾಗುತ್ತಿದ್ದು ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಸ್ ಪಿ ಗೆ ಸೂಚನೆ ನೀಡಿದ್ದೇನೆ .

ಡ್ರಗ್ಸ್ ವಿಚಾರದಲ್ಲಿ ರಿಸಲ್ಟ್ ತೋರಿಸುವ ಜವಾಬ್ದಾರಿ ಪೊಲೀಸರ ಮೇಲಿದ್ದು, ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕಲಾಗುವುದು. ಸದ್ಯ ಕಾಲೇಜುಗಳು ಬಂದ್ ಆಗಿದ್ದು ಕಾಲೇಜ್ ಬಂದ್ ಇದ್ದರೂ ಡ್ರಗ್ಸ್ ದಂಧೆ ನಡೆಯುತ್ತಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಡ್ರಗ್ಸ್ ನಿಯಂತ್ರಣ ವಿಚಾರದಲ್ಲಿ ಮುಖ್ಯಮಂತ್ರಿಗಳು ಸೋಮವಾರ ಸಭೆ ನಡೆಸಿ ಸೂಚನೆ ನೀಡಿದ್ದು ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಬಾರದು. ಪೊಲೀಸ್ ಇಲಾಖೆ ಬೇರೆ ಕಡೆಯೂ ಕಾರ್ಯಾಚರಣೆ ನಡೆಸುತ್ತಿದೆ ಆದರೆ ಸುದ್ದಿಯಾಗಲ್ಲ.

ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರದಲ್ಲಿ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ಡ್ರಗ್ಸ್ ದಂಧೆ ಮಟ್ಟ ಹಾಕುವ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಬೆಂಗಳೂರು -ಮಂಗಳೂರು ದೊಡ್ಡ ಮಟ್ಟದಲ್ಲಿ ಡ್ರಗ್ಸ್ ಹಬ್ ಆಗಿದ್ದು ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವತ್ತ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಲಿದೆ ಎಂದರು.


Spread the love