Home Mangalorean News Kannada News ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಾಜಿ ಮೇಯರ್​ ರವಿಕುಮಾರ್​ ಕೊಲೆ

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಾಜಿ ಮೇಯರ್​ ರವಿಕುಮಾರ್​ ಕೊಲೆ

Spread the love

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಾಜಿ ಮೇಯರ್​ ರವಿಕುಮಾರ್​ ಕೊಲೆ

ತುಮಕೂರು: ಪಾಲಿಕೆ ಮಾಜಿ ಮೇಯರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ತುಮಕೂರಿನ ಬಟವಾಡಿ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಟಾಟಾ ಏಸ್​ನಲ್ಲಿ ಬಂದ ಸುಮಾರು 7 ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ರವಿಕುಮಾರ್ ಕ್ಯಾತಸಂದ್ರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕಳೆದ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಈ ಬಗ್ಗೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version