ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

Spread the love

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

ತುಮಕೂರು: ತುಮಕೂರು  ಜಿಲ್ಲೆಯ ಶಿರಾ  ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್​ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್​ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love
Subscribe
Notify of

0 Comments
Inline Feedbacks
View all comments