ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Spread the love

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಶುಕ್ರವಾರ ಸಂಜೆ ನೆರವೇರಿಸಿದರು.

ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷರುಗಳಾದ ರಾಮದಾಸ ಮಡಮಣ್ಣಾಯ,ಡಾ.ಬಾಲಕೃಷ್ಣ ಮೂಡಂಬಡಿತ್ತಾಯ, ಪ್ರಧಾನ ಸಂಚಾಲಕರಾದ ಎಂ.ಬಿ.ಪುರಾಣಿಕ್,ಕಾರ್ಯಾಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ,ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊಳದವರು ಉಪಸ್ಥಿತರಿದ್ದರು.

ವಿಶ್ವದಾದ್ಯಂತ ಚದುರಿಹೋಗಿರುವ ತುಳು ಶಿವಳ್ಳಿ ಬ್ರಾಹ್ಮಣರನ್ನು ಒಗ್ಗೂಡಿಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶವಾಗಿದ್ದು, ವಿಶಿಷ್ಟವಾದ ಶಿವಳ್ಳಿ ತುಳು ಭಾಷೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ಕುರಿತು ಸಮಾಜ ಬಾಂಧವರಲ್ಲಿ ಜಾಗೃತಿ ಮೂಡಿಸಿ, ಅವುಗಳನ್ನು ಉಳಿಸಿ ಬೆಳೆಸಲು ಪ್ರೇರಣೆ ನೀಡುವುದು ಈ ಸಮ್ಮೇಳನದ ಪ್ರಧಾನ ಉದ್ದೇಶವಾಗಿದೆ.

ಎರಡು ದಿನಗಳಲ್ಲಿ ಸಮ್ಮೇಳನದಲ್ಲಿ ಧಾರ್ಮಿಕ ಸಮಾವೇಶ, ಉದ್ಯಮಶೀಲತಾ ಸಮಾವೇಶ, ಶೈಕ್ಷಣಿಕ ಸಮಾವೇಶ, ತುಳು ಶಿವಳ್ಳಿ ಸಮಾಜ ಅಂದು-ಇಂದು – ಮುಂದು ವಿಚಾರಗೋಷ್ಠಿ,ಮಹಿಳಾ ಸಮಾವೇಶ, ಯುವ ವಿಭಾಗ ಸಮಾವೇಶ, ಧಆರ್ಮಿಕ ಚಿಂತನಾ ಗೋಷ್ಠಿ, ಸಾಧಕರ ಸಮಾವೇಶಗಳು ನಡೆಯಲಿವೆ. 15ರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಅಲ್ಲದೇ ಪ್ರತಿದಿನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.


Spread the love